Connect with us

    LATEST NEWS

    ಚಂಡಿಗಢ – ಪಂಕ್ಚರ್ ಆಗಿ ನಿಂತಿದ್ದ ಕಾರಿಗೆ ಎಸ್ ಯುವಿ ಡಿಕ್ಕಿ ಆರು ಮಂದಿ ಸಾವು

    ಚಂಡೀಗಢ ಮಾರ್ಚ್ 11: ಹರಿಯಾಣದ ರೆವಾರಿ ಎಂಬಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದು, 6 ಮಂದಿ ಗಾಯಗೊಂಡಿದ್ದಾರೆ.


    ಖಾರ್ಖರಾ ಗ್ರಾಮದ ಬಳಿ ಬಳಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಮಹಿಳೆಯರು ಮತ್ತು ಇಬ್ಬರು ಪುರುಷರು ಸಾವಿಗೀಡಾಗಿದ್ದಾರೆ. ಪಂಕ್ಚರ್ ಆಗಿ ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಹಿಂದಿನಿಂದ ಬಂದ ಎಕ್ಸ್‌ಯುವಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.

    ಟೈರ್ ಪಂಕ್ಚರ್ ಆಗಿದ್ದರಿಂದ ಕಾರನ್ನು ರಸ್ತೆ ಬದಿ ನಿಲ್ಲಿಸಲಾಗಿತ್ತು. ಆಗ ಹಿಂದಿನಿಂದ ಬಂದ ಎಕ್ಸ್‌ಯುವಿ ಕಾರು ಡಿಕ್ಕಿ ಹೊಡೆದಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply