LATEST NEWS
ದನ ಕಳ್ಳಸಾಗಾಣಿಕೆದಾರ ಎಂದು ಪಿಯುಸಿ ವಿಧ್ಯಾರ್ಥಿಯನ್ನು ಗುಂಡಿಕ್ಕಿ ಕೊಂದ ಗೋರಕ್ಷಕರು
ಹರ್ಯಾಣ ಸೆಪ್ಟೆಂಬರ್ 03: ಗೋ ಕಳ್ಳಸಾಗಾಣಿದಾರ ಎಂದು ಪಿಯುಸಿ ವಿಧ್ಯಾರ್ಥಿಯನ್ನು ಗೋರಕ್ಷಕರು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಹರಿಯಾಣದಲ್ಲಿ ನಡೆದಿದೆ. ಹರಿಯಾಣದ ಫರಿದಾಬಾದ್ ನಲ್ಲಿ ಆಗಸ್ಟ್ 23 ರಂದು ಈ ಘಟನೆ ನಡೆದಿದೆ. ಹತ್ಯೆಯಲ್ಲಿ ಗೋಸಂರಕ್ಷಣಾ ಗುಂಪಿಗೆ ಸೇರಿದ ಐವರು ದಾಳಿಕೋರರನ್ನು ಪೊಲೀಸರು ಬಂಧಿಸಿದ್ದಾರೆ. ಆರ್ಯನ್ ಮಿಶ್ರಾ ಎಂಬ ಬಾಲಕನನ್ನು ಗೋರಕ್ಷಾ ಗ್ಯಾಂಗ್ ಗುಂಡಿಕ್ಕಿ ಹತ್ಯೆ ಮಾಡಿತ್ತು.
ಕೊಲೆ ಆರೋಪದಲ್ಲಿ ಅನಿಲ್ ಕೌಶಿಕ್, ವರುಣ್, ಕೃಷ್ಣ, ಆದೇಶ್ ಮತ್ತು ಸೌರಭ್ ಅರೆಸ್ಟ್ ಆಗಿದ್ದಾರೆ. ಆರ್ಯನ್ ಮಿಶ್ರಾ ತನ್ನ ಸ್ನೇಹಿತರೊಂದಿಗೆ ನೂಡಲ್ಸ್ ತಿನ್ನಲು ಪಟ್ಟಣಕ್ಕೆ ಬಂದಾಗ ಈ ದಾಳಿ ನಡೆದಿದ್ದು, 30 ಕಿ.ಮೀ.ವರೆಗೆ ಕಾರಿನಲ್ಲಿ ಹಿಂಬಾಲಿಸಿದ ದುಷ್ಕರ್ಮಿಗಳು ವಿದ್ಯಾರ್ಥಿಯನ್ನು ಹತ್ಯೆ ಮಾಡಿದ್ದಾರೆ.
ಫರೀದಾಬಾದ್‌ನಿಂದ ಎರಡು ವಾಹನಗಳಲ್ಲಿ ಕೆಲವರು ಜಾನುವಾರುಗಳನ್ನು ಸಾಗಿಸುತ್ತಿದ್ದಾರೆ ಎಂಬ ಮಾಹಿತಿ ಗೋರಕ್ಷಕ ದಳಕ್ಕೆ ಸಿಕ್ಕಿತ್ತು. ಈ ಹಿನ್ನಲೆ ಅವರು ವಾಹನಗಳನ್ನು ತಪಾಸಣೆ ಮಾಡುತ್ತಿದ್ದಾಗ, ಆರ್ಯನ್ ಮಿಶ್ರಾ ತನ್ನ ಸ್ನೇಹಿತರೊಂದಿಗೆ ಕಾರನ್ನು ತಲುಪಿದರು. ನಿಲ್ಲಿಸುವಂತೆ ಕೇಳಿದರೂ ವಾಹನ ನಿಲ್ಲಿಸಲಿಲ್ಲ. ದಾಳಿಕೋರರ ಗುಂಪು ಅವರನ್ನು ಹಿಂಬಾಲಿಸಿ ದೆಹಲಿ-ಆಗ್ರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಹರಿಯಾಣದ ಗಧಪುರಿ ಬಳಿ ಆರ್ಯನ್ ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿತು. ಆರ್ಯನ್ ಕುತ್ತಿಗೆಗೆ ಗುಂಡು ತಗುಲಿದೆ. ಆರೋಪಿಗಳು ಕಾರನ್ನು ಹಿಂಬಾಲಿಸಿ ಚಾಲಕ ಹರ್ಷಿತ್ ನನ್ನು ನಿಲ್ಲಿಸುವಂತೆ ಹೇಳಿದ್ದಾರೆ. ಆದರೆ ಕಾರಿನಲ್ಲಿದ್ದ ಶಾಂಕಿ ಎಂಬಾತನಿಗೆ ಕೆಲವರ ಜೊತೆ ಗಲಾಟೆಗಳಾಗಿದ್ದು, ಅವರು ಗೂಂಡಾಗಳನ್ನು ಕಳಿಸಿ ಹತ್ಯೆಗೆ ಸ್ಕೆಚ್ ಹಾಕಿದ್ದಾರೆ ಎಂದು ಭಾವಿಸಿದ್ದರು.
ಕಾರು ನಿಲ್ಲಿಸದೇ ಇದ್ದಾಗ ಆರೋಪಿಗಳು ಕಾರಿನತ್ತ ಗುಂಡು ಹಾರಿಸಿದರು. ಈ ವೇಳೆ ಆರ್ಯನ್ ಕುತ್ತಿಗೆಗೆ ತಗುಲಿತು. ಬಳಿಕ ಕಾರು ನಿಲ್ಲಿಸಿದಾಗ ಕಾರಿನಲ್ಲಿ ಮಹಿಳೆಯರು ಇದ್ದಿದ್ದನ್ನು ನೋಡಿ ಆರೋಪಿಗಳು ತಪ್ಪಾದ ಕಾರು ಎಂದು ಅರಿವಾಗಿ ಪರಾರಿಯಾಗಿದ್ದರು. ಆರೋಪಿಗಳು ಕಾರಿನಲ್ಲಿ ಇಬ್ಬರು ಮಹಿಳೆಯರನ್ನು ನೋಡಿದಾಗ, ಅವರು ತಪ್ಪಾದ ವ್ಯಕ್ತಿಗೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ಅವರು ಭಾವಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆರ್ಯನ್‍ನನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಆತ ಒಂದು ದಿನದ ನಂತರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ