BELTHANGADI
ಹಾಸನ – ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ಬರುತ್ತಿದ್ದವರ ಮೇಲೆ ಹರಿದ ಖಾಸಗಿ ಬಸ್ – ಇಬ್ಬರು ಸಾವು

ಹಾಸನ ಫೆಬ್ರವರಿ 23: ಮಹಾಶಿವರಾತ್ರಿ ಪ್ರಯುಕ್ತ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಹೋಗುತ್ತಿದ್ದವರ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಆನಗೋಳು ಗ್ರಾಮದ ಸುರೇಶ್ (60), ಕುಮಾರ್ (55) ಮೃತ ದುರ್ದೈವಿಗಳು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ದಿನೇಶ್ ಎಂಬುವರಿಗೆ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ಹೋಗುತ್ತಿದ್ದರು. ದಾರಿ ಮಧ್ಯೆ ಖಾಸಗಿ ಬಸ್ ಪಾದಾಯಾತ್ರಿಗಳ ಮೇಲೆ ಹರಿದಿದೆ. ಶಾಂತಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
