KARNATAKA
ಟೊಯೋಟಾ ಇಟಿಯೋಸ್ ಕಾರು ಕಂಟೇನರ್ ನಡುವೆ ಭೀಕರ ಅಪಘಾತ – ಒಂದು ಮಗು ಸೇರಿ 6 ಮಂದಿ ಸಾವು
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಹಾಸನ ಮೇ 26 : ಕಂಟೈನರ್ ಲಾರಿ ಮತ್ತು ಟೊಯೋಟಾ ಇಟಿಯೋಸ್ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ 6 ಮಂದಿ ಸಾವನಪ್ಪಿದ ಘಟನೆ ಹಾಸನ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಕಂದಲಿ ಸಮೀಪದ ಇಂದು ನಡೆದಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಮೂರು ಪುರುಷರು, ಒಂದು ಮಗು ಸೇರಿ 6 ಮಂದಿ ಮೃತರಾಗಿದ್ದಾರೆ. ಒಂದೇ ಕುಟುಂಬದ ನಾರಾಯಣ ಸ್ವಾಮಿ, ಸುನಂದಾ, ರವಿಕುಮಾರ್, ನೇತ್ರ, ಚೇತನ್ (ಬಾಲಕ), ರಾಕೇಶ್ (ಡ್ರೈವರ್) ಮೃತರು.
ಎಲ್ಲರೂ ಚಿಕ್ಕಬಳ್ಳಾಪುರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ, ಅಂದರಹಳ್ಳಿ ಹಾಗೂ ದೇವನಹಳ್ಳಿ ಬಳಿಯ ಕಾರಹಳ್ಳಿ ಮೂಲದವರು. ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಲು KA-53-C.1419 ನಂಬರ್ನ ಇಟಿಯೋಸ್ ಕಾರಿನಲ್ಲಿ ತೆರಳಿದ್ದ ಕುಟುಂಬ ಸದಸ್ಯರು ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಬೆಳಗಿನ ಜಾವ ನಿದ್ದೆ ಮಂಪರಿನಲ್ಲಿ ವಾಹನ ಡಿವೈಡರ್ ಗೆ ಡಿಕ್ಕಿ ಹೊಡೆದು ಪಕ್ಕದ ಲೇನ್ ಗೆ ಹಾರಿ ಕಂಟೇನರ್ಗೆ ಗುದ್ದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
You must be logged in to post a comment Login