Connect with us

KARNATAKA

ಹಾಸನ – ಪ್ರೀತಿ ನಿರಾಕರಿಸಿದ್ದಕ್ಕೆ ಅಪಘಾತ ಮಾಡಿಸಿ ಕೊಲೆ ಮಾಡಿದ ಪಾಗಲ್ ಪ್ರೇಮಿ

ಹಾಸನ, ಅಗಸ್ಟ್ 19: ಅಗಸ್ಟ್ ಮೂರ ರಂದು ನಡೆದಿದ್ದು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದೊಡ್ಡ ಟ್ವಿಸ್ಟ್ ಸಿಕ್ಕಿದ್ದು, ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿ ಕಾರಿನಿಂದ ಯುವತಿಗೆ ಅಪಘಾತ ಮಾಡಿಸಿ ಕೊಲೆ ಮಾಡಿದ್ದಾನೆ.


ಆಗಸ್ಟ್ 3 ರಂದು ಹಾಸನ ಹೊರವಲಯದ ಬೂವನಹಳ್ಳಿ ಕ್ರಾಸ್ ಬಳಿ ಸರಣಿ ಅಪಘಾತ ನಡೆದಿತ್ತು. ಆಲ್ಟೋ ಕಾರೊಂದು ಕೆಲಸಕ್ಕೆ ನಡೆದುಕೊಂಡು ಹೋಗುತ್ತಿದ್ದ ಯುವತಿ ಶರಣ್ಯಳಿಗೆ ಡಿಕ್ಕಿ ಹೊಡೆದು ಬಳಿಕ ಹಾಲಿನ ಗೂಡ್ಸ್ ಆಟೋ, 2 ಬೈಕ್ ಹಾಗೂ ಸಾರಿಗೆ ಬಸ್‌ಗೆ ಡಿಕ್ಕಿ ಹೊಡೆದು ಚಾಲಕ ಎಸ್ಕೇಪ್ ಆಗಿದ್ದ.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಶರಣ್ಯ ಆಗಸ್ಟ್ 4 ರಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಳು. ಅಂದೇ ಶರಣ್ಯಳ ಅಣ್ಣ ಸಚಿನ್ ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು ಆಗಸ್ಟ್ 12ರಂದು ಸಕಲೇಶಪುರದಲ್ಲಿ ಆರೋಪಿ ಭರತ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ಸತ್ಯಾಂಶ ಬಾಯ್ಬಿಟ್ಟಿದ್ದಾನೆ.

ಶರಣ್ಯಳ ಹಿಂದೆ ಬಿದ್ದಿದ್ದ ಭರತ್ ಆಕೆಯನ್ನು ಪ್ರೀತಿಸುವಂತೆ ಒತ್ತಾಯಿಸಿದ್ದ. ಆದರೆ ಶರಣ್ಯ ನಿರಾಕರಿಸಿದ್ದಳು. ಇದರಿಂದ ಕೋಪಗೊಂಡ ಭರತ್, ಮೈಸೂರಿನಿಂದ ಕಾರು ಬಾಡಿಗೆಗೆ ತಂದು ಆಗಸ್ಟ್ 3 ರಂದು ಕೆಲಸಕ್ಕೆ ನಡೆದುಕೊಂಡು ಹೋಗುತ್ತಿದ್ದ ಶರಣ್ಯಳಿಗೆ ಡಿಕ್ಕಿ ಹೊಡೆದು ಕೊಲೆ ಮಾಡಿರುವುದಾಗಿ ತನಿಖೆ ವೇಳೆ ಒಪ್ಪಿಕೊಂಡಿದ್ದಾನೆ. ಭರತ್‌ನನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ

Advertisement
Click to comment

You must be logged in to post a comment Login

Leave a Reply