Connect with us

    KARNATAKA

    ಹಾಸನ: ಆಟವಾಡುತ್ತಿದ್ದಾಗ ಕಾಲು ಜಾರಿ ನಾಲೆಗೆ ಬಿದ್ದು 5ರ ಬಾಲಕಿ ಮೃತ್ಯು..!

    ಆಟವಾಡುತ್ತಿದ್ದಾಗ ಕಾಲುಜಾರಿ ಬಿದ್ದು ಬಾಲಕಿಯೊಬ್ಬಳು ನೀರುಪಾಲಾಗಿರುವ ಘಟನೆ ಹಾಸನದ ಅರಕಲಗೂಡು ತಾಲೂಕಿನ ಮಧುರನಹಳ್ಳಿಯಲ್ಲಿ ನಡೆದಿದೆ.

    ಹಾಸನ: ಆಟವಾಡುತ್ತಿದ್ದಾಗ ಕಾಲುಜಾರಿ ಬಿದ್ದು ಬಾಲಕಿಯೊಬ್ಬಳು ನೀರುಪಾಲಾಗಿರುವ ಘಟನೆ ಹಾಸನದ ಅರಕಲಗೂಡು ತಾಲೂಕಿನ ಮಧುರನಹಳ್ಳಿಯಲ್ಲಿ ನಡೆದಿದೆ.

    ರೇವಣ್ಣ ಹಾಗೂ ಭಾಗ್ಯ ದಂಪತಿಯ ಮಗಳು ಸುಪ್ರೀತಾ (5) ಮೃತ ಬಾಲಕಿ ಎಂದು ಗುರುತಿಸಲಾಗಿದೆ.

    ಶುಕ್ರವಾರ ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಶಾಲೆಗೆ ರಜೆ ಇದ್ದ ಕಾರಣ ಬಾಲಕಿ ಮನೆಯಲ್ಲಿದ್ದಳು.

    ಆದರೆ ಮಧ್ಯಾಹ್ನದ ವೇಳೆಗೆ ಗ್ರಾಮದ ಸಮೀಪವಿರುವ ನಾಲೆಯ ಬಳಿ ಸ್ನೇಹಿತರೊಂದಿಗೆ ಆಟವಾಡುತ್ತಿದ್ದ ವೇಳೆ ಕಾಲು ಜಾರಿ ನಾಲೆಗೆ ಬಿದ್ದು ಕೊಚ್ಚಿ ಹೋಗಿದ್ದಾಳೆ.

    ಹಾರಂಗಿ ಬಲದಂಡೆ ನಾಲೆಯಲ್ಲಿ ದುರ್ಘಟನೆ ಸಂಭವಿಸಿದೆ. ಮಗುವಿನ ಮೃತದೇಹಕ್ಕಾಗಿ ಆರು ಕಿಲೋಮೀಟರ್ ವರೆಗೂ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧಕಾರ್ಯ ನಡೆಸಿದ್ದಾರೆ.

    ಆದರೆ ಇದುವರೆಗೂ ಬಾಲಕಿಯ ಮೃತದೇಹ ಪತ್ತೆಯಾಗಿಲ್ಲ.

    Share Information
    Advertisement
    Click to comment

    You must be logged in to post a comment Login

    Leave a Reply