Connect with us

    KARNATAKA

    ಹಾಸನ : ಹೇಮಾವತಿ ನದಿಗೆ ಜಿಗಿದು ಗುತ್ತಿಗೆದಾರ ಆತ್ಮಹತ್ಯೆ, ದೃಶ್ಯ ಸಿಸಿಟಿವಿಯಲ್ಲಿ ದಾಖಲು..!

    ಹಾಸನ: ಹಾಸನದ ಹೇಮಾವತಿ ನದಿಗೆ ಜಿಗಿದು ಗುತ್ತಿಗೆದಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣದಲ್ಲಿ ಈ ಕೃತ್ಯ ನಡೆದಿದ್ದು ಗುತ್ತಿಗೆದಾರ ನದಿಗೆ ಜಿಗಿಯುವ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.


    ಹೊಳೆನರಸೀಪುರದ ಪ್ರಥಮ ದರ್ಜೆ ಗುತ್ತಿಗೆದಾರ ಕೆ.ಸತ್ತಾರ್ (79) ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾರೆ. ವೈಯುಕ್ತಿಕ ಸಮಸ್ಯೆ ಹಾಗೂ ಬೇರೆಯವರಿಗೆ ಕೊಟ್ಟಿದ್ದ ಲಕ್ಷಾಂತರ ರೂಪಾಯಿ ಹಣ ವಾಪಾಸ್ ಬಾರದ ಕಾರಣ ಮನನೊಂದು ಸತ್ತಾರ್ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಗುರುವಾರ ಬೆಳಿಗ್ಗೆ 9 ಗಂಟೆ ಸಮಯದಲ್ಲಿ ಪಟ್ಟಣದ ಹೇಮಾವತಿ ನದಿಗೆ ಜಿಗಿದು ಸತ್ತಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸತ್ತಾರ್ ನದಿಗೆ ಜಿಗಿಯುವ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶವ ಪತ್ತೆಯಾಗದ ಹಿನ್ನಲೆಯಲ್ಲಿ ಕುಂದಾಪುರದ ಮುಳುಗು ತಜ್ಞರಿಂದ ಇನ್ನೂ ಶೋಧ ಕಾರ್ಯಾಚರಣೆ ಮುಂದುವರೆದಿದ್ದು ಹೊಳೆನರಸೀಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

    Share Information
    Advertisement
    Click to comment

    You must be logged in to post a comment Login

    Leave a Reply