Connect with us

    KARNATAKA

    ಶ್ರವಣಬೆಳಗೊಳ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನ

    ಹಾಸನ ಮಾರ್ಚ್ 23: ಶ್ರವಣಬೆಳಗೊಳದ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನರಾಗಿದ್ದಾರೆ.


    ಚನ್ನರಾಯಪಟ್ಟಣ ತಾಲೂಕಿನ ಶ್ರೀ ಕ್ಷೇತ್ರ ಶ್ರವಣಬೆಳಗೊಳ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗಳು ಕಳೆದ 4 ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಬೆಳಗ್ಗೆ ಭಂಡಾರ ಭವನದಲ್ಲಿ ಬಿಪಿ, ಶುಗರ್ ಏರುಪೇರಿನಿಂದ ಅಸ್ವಸ್ಥಗೊಂಡು ಸ್ವಾಮೀಜಿ ಕೆಳಗೆ ಬಿದ್ದಿದ್ದರು.

    ಕೂಡಲೇ ಮಠದಲ್ಲೇ ವೈದ್ಯರು ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅಂಬುಲೆನ್ಸ್‌ ಮೂಲಕ ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸ್ವಾಮೀಜಿ ನಿಧನರಾಗಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply