LATEST NEWS
ಹಿಜ್ಬುಲ್ಲಾ ಉಗ್ರಗಾಮಿ ಸಂಘಟನೆಯ ನಾಯಕ ಹಸನ್ ನಸ್ರಲ್ಲಾ ಸಾವು – ಇಸ್ರೇಲ್ ಸೇನೆ
ಲೆಬನಾನ್ ಸೆಪ್ಟೆಂಬರ್ 28: ಲೆಬನಾನ್ ನ ಬೈರುತ್ ನಲ್ಲಿ ನಿನ್ನೆ ಇಸ್ರೇಲ್ ಸೇನೆ ನಡೆಸಿದ ಭೀಕರ ದಾಳಿಯಲ್ಲಿ ಹಿಜ್ಬುಲ್ಲಾ ಉಗ್ರಗಾಮಿ ಸಂಘಟನೆಯ ನಾಯಕ ಹಸನ್ ನಸ್ರಲ್ಲಾ ಸಾವನಪ್ಪಿದ್ದಾರೆ ಎಂದು ಇಸ್ರೇಲಿ ಮಿಲಿಟರಿ ಇಂದು ಶನಿವಾರ ಘೋಷಿಸಿಕೊಂಡಿದೆ.
ಮೂರು ದಶಕಗಳಿಗೂ ಹೆಚ್ಚು ಕಾಲ ಹಿಜ್ಬುಲ್ಲಾವನ್ನು ಮುನ್ನಡೆಸಿರುವ ನಸ್ರಲ್ಲಾಹ್, ಬೈರುತ್‌ನ ದಕ್ಷಿಣದ ದಹೀಹ್‌ನಲ್ಲಿ ಆರು ವಸತಿ ಕಟ್ಟಡಗಳನ್ನು ನೆಲಸಮಗೊಳಿಸಿದ ಬೃಹತ್ ವೈಮಾನಿಕ ದಾಳಿಯಲ್ಲಿ ಕೊಲ್ಲಲ್ಪಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ. ನಿನ್ನೆಯ ದಾಳಿಯಲ್ಲಿ ಮಕ್ಕಳು ಸೇರಿದಂತೆ ಕನಿಷ್ಠ ಆರು ಜನರು ಮೃತಪಟ್ಟಿದ್ದರು. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ. ಕಳೆದ ವರ್ಷದಲ್ಲಿ ಲೆಬನಾನಿನ ರಾಜಧಾನಿಯಲ್ಲಿ ಸಂಭವಿಸಿದ ಅತಿ ದೊಡ್ಡ ಸ್ಫೋಟ ಇದಾಗಿದೆ.
ಹಸನ್ ನಸರಲ್ಲಾಹ್ ಸಾವು ಎಂದು ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಕರ್ನಲ್ ನಡಾವ್ ಶೋಷಾನಿ ತಮ್ಮ ಎಕ್ಸ್ ಖಾತೆಯಲ್ಲಿ ಘೋಷಿಸಿದ್ದಾರೆ. ಹೆಜ್ಬುಲ್ಲಾ ಉಗ್ರರು ನೂರಾರು ರಾಕೆಟ್ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಇಸ್ರೇಲ್ ಸೇನಾಪಡೆ ದಕ್ಷಿಣ ಮತ್ತು ಪೂರ್ವ ಲೆಬನಾನ್ ಮೇಲೆ ಹೆಜ್ಬುಲ್ಲಾ ಬಂಡುಕೋರರನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಿತ್ತು.
ಈ ಸಂದರ್ಭದಲ್ಲಿ ಹೆಜ್ಬುಲ್ಲಾ ಬಾಹುಳ್ಯದ ದಕ್ಷಿಣ ಬೈರೂತ್ ಪ್ರದೇಶದ ಮೇಲೆ ಇಸ್ರೇಲ್ ಪಡೆ ಭಾರೀ ಪ್ರಮಾಣದ ಬಾಂಬ್ ದಾಳಿ ನಡೆಸಿದ ಪರಿಣಾಮ ಹಲವಾರು ಮನೆಗಳು ಧ್ವಂಸಗೊಂಡಿದ್ದವು.
ಇಸ್ರೇಲಿ ಪ್ರಜೆಗಳನ್ನು ಬೆದರಿಸಿದರೂ ನಾವು ಅವರನ್ನು ಬೀಡುವುದಿಲ್ಲ ಎಂದು ಇಸ್ರೇಲ್ ಸೇನೆ ಎಚ್ಚರಿಕೆ ನೀಡಿದೆ.