ಹಾಸನ, ಮಾರ್ಚ್ 23 : ಕೇವಲ 7 ಸಾವಿರ ರೂಪಾಯಿ ಹಣಕ್ಕಾಗಿ ಗೆಳೆಯನನ್ನೇ ಅಪಹರಿಸಿ, ಗಾಂಜಾ ಅಮಲಿನಲ್ಲಿ ಅಮಾನುಷವಾಗಿ ಹಲ್ಲೆ ನಡೆಸಿ ಕೊಲೆ ಮಾಡಿರುವ ಭೀಕರ ಘಟನೆ ನಡೆದಿದ್ದು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಅರಸೀಕೆರೆ ತಾಲ್ಲೂಕಿನ ಕಾಡಯ್ಯನಕೊಪ್ಪಲು ಗ್ರಾಮದ ವರುಣ್ (22) ಕೊಲೆಯಾದ ದುರ್ದೈವಿ. ಸದ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸತೀಶ್, ಉಮರ್, ವಿಜಯ್, ಚೇತನ್ ಮತ್ತು ಮನು ಎಂಬ ಐವರು ಆರೋಪಿಗಳನ್ನು ಬಂಧಿಸಲಾಗಿದ್ದು ಪ್ರಕರಣದ ಪ್ರಮುಖ ಆರೋಪಿ ಶಶಾಂಕ್ ಮತ್ತು ಇತರರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಮೃತ ವರುಣ್ ಬೆಂಗಳೂರಿನಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಕಳೆದ ಆರು ತಿಂಗಳ ಹಿಂದೆಯಷ್ಟೇ ತಂದೆಯನ್ನು ಕಳೆದುಕೊಂಡಿದ್ದ ವರುಣ್, ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ತಾಯಿಯಿದ್ದ ಊರಿಗೆ ಬಂದಿದ್ದಾನೆ. ಮಾರ್ಚ್ 10ರಂದು ಬೈಕ್ ರಿಪೇರಿ ಮಾಡಿಸಲು ಹೋದವನು ಮನೆಗೆ ಮರಳದಿದ್ದಾಗ, ಆತನ ತಾಯಿ ಕಲಾವತಿ ಅವರು ಮಾರ್ಚ್ 15ರಂದು ಗಂಡಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಮಾರ್ಚ್ 10ರಂದು ಮುಖ್ಯ ಆರೋಪಿ ಶಶಾಂಕ್ ಮತ್ತು ಆತನ ಏಳು ಮಂದಿ ಸಹಚರರು ಸೇರಿ ವರುಣ್ ಹಾಗೂ ಆತನ ಸ್ನೇಹಿತ ಲೋಹಿತ್ನನ್ನು ಅಪಹರಿಸಿದ್ದರು. ಆರೋಪಿ ಶಶಾಂಕ್, ವರುಣ್ನಿಂದ ಗಾಂಜಾ ಪಡೆಯಲು 7,000 ಹಣ ನೀಡಿದ್ದ ಎನ್ನಲಾಗಿದೆ. ಆದರೆ, ವರುಣ್ ಗಾಂಜಾ ನೀಡದಿದ್ದಕ್ಕೆ ಆಕ್ರೋಶಗೊಂಡ ಶಶಾಂಕ್ ತನ್ನ ಗ್ಯಾಂಗ್ ಜೊತೆ ಸೇರಿ ಈ ಕೃತ್ಯ ಎಸಗಿದ್ದಾನೆ. ಕಿರಣ್ ಎಂಬಾತನ ತೋಟದ ಮನೆಯಲ್ಲಿ ವರುಣ್ನನ್ನು ಕೂಡಿ ಹಾಕಿ ಮಾರ್ಚ್ 12ರವರೆಗೆ ಸತತ ಎರಡು ದಿನಗಳ ಕಾಲ ಮೃಗೀಯವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ.
ವರುಣ್ನಿಂದ ಗಾಂಜಾ ಪಡೆಯಲು ಶಶಾಂಕ್ 7 ಸಾವಿರ ರೂ ಹಣ ನೀಡಿದ್ದ. ಆದರೆ ವರುಣ್ ಗಾಂಜಾ ನೀಡಿರಲಿಲ್ಲ. ಹೀಗಾಗಿ ಶಶಾಂಕ್ ತನ್ನ ಸ್ನೇಹಿತರ ಜೊತೆ ಸೇರಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗುತ್ತಿದೆ. ಈ ಬಗ್ಗೆ ಕೂಡ ತನಿಖೆ ನಡೆಸಲಾಗುತ್ತಿದೆ ಎಂದು ಎಸ್ಪಿ ಶುಭಾನ್ವಿತ ಹೇಳಿದ್ದಾರೆ.
ಆರು ತಿಂಗಳ ಹಿಂದೆ ತಂದೆ ಮೃತಪಟ್ಟಿದ್ದರಿಂದ ಕೆಲಸಕ್ಕೆಂದು ಬೆಂಗಳೂರು ಸೇರಿಕೊಂಡಿದ್ದ ವರುಣ್, ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ. ಯುಗಾದಿ ಹಿನ್ನೆಲೆ ತಾಯಿ ಜೊತೆಗೆ ಊರಿಗೆ ಬಂದಿದ್ದ. ಬೈಕ್ ರಿಪೇರಿ ಮಾಡಿಸಿಕೊಂಡು ಬರುವುದಾಗಿ ಹೇಳಿ ಹೋದವನು ವಾಪಸ್ ಬರಲಿಲ್ಲ. ಎಲ್ಲೆಡೆ ಹುಡುಕಾಡಿದ್ದ ತಾಯಿ ಕಡೆಗೆ ನಾಪತ್ತೆ ಕೇಸ್ ನೀಡಿದ್ದರು. ಆದರೆ ಅಷ್ಟರಲ್ಲಿ ಶಶಾಂಕ್ ಗ್ಯಾಂಗ್ ವರುಣ್ ಹಾಗೂ ಆತನ ಸ್ನೇಹಿತ ಲೋಹಿತ್ನನ್ನ ಕಿಡ್ನ್ಯಾಪ್ ಮಾಡಿ ಬಳಿಕ ಕೊಂದೇ ಬಿಟ್ಟಿದ್ದಾರೆ.