Connect with us

    KARNATAKA

    ಹಾವೇರಿ : ಪಟಾಕಿ ಅಂಗಡಿಯಲ್ಲಿ ಸ್ಪೋಟ, ಮೂವರು ನಾಪತ್ತೆ -ಅಗ್ನಿ ಶಾಮಕ ದಳ ದೌಡು..!

    ಪಟಾಕಿ ಅಂಗಡಿಯಲ್ಲಿ ಭಾರಿ ಸ್ಪೋಟ ಸಂಭವಿಸಿ ಕೋಟ್ಯಂತರ ಮೌಲ್ಯದ ಪಟಾಕಿ ಸುಟ್ಟು ಕರಕಲಾಗಿರುವ ಘಟನೆ ಹಾವೇರಿಯಲ್ಲಿ ಇಂದು ನಡೆದಿದೆ.

    ಹಾವೇರಿ: ಪಟಾಕಿ ಅಂಗಡಿಯಲ್ಲಿ ಭಾರಿ ಸ್ಪೋಟ ಸಂಭವಿಸಿ ಕೋಟ್ಯಂತರ ಮೌಲ್ಯದ ಪಟಾಕಿ ಸುಟ್ಟು ಕರಕಲಾಗಿರುವ ಘಟನೆ ಹಾವೇರಿಯಲ್ಲಿ ಇಂದು ನಡೆದಿದೆ.

    ಹಾವೇರಿಯ ಹೊರವಲಯದ ಸಾತೇನಹಳ್ಳಿ ಬಳಿ ಕುಮಾರ್​ ಎಂಬುವವರಿಗೆ ಸೇರಿದ ಭೂಮಿಕಾ ಪಟಾಕಿ ಗೋದಾಮಿನಲ್ಲಿ ಈ ದುರಂತ ಸಂಭವಿಸಿದ್ದು, ಸುಮಾರು ಒಂದು ಕೋಟಿಗೂ ಹೆಚ್ಚು ಮೌಲ್ಯದ ಪಟಾಕಿ ದಾಸ್ತಾನು ಮಾಡಲಾಗಿತ್ತು.

    ಇದೀಗ ಏಕಾಏಕಿ ಅದಕ್ಕೆ ಬೆಂಕಿ ತಗುಲಿ ಸ್ಪೋಟ ಸಂಭವಿಸಿದ್ದು, ಅಪಾರ ಪ್ರಮಾಣ ವಸ್ತುಗಳು ಬೆಂಕಿಗಾಹುತಿಯಾಗಿದೆ.

    ಇನ್ನು ಕೆಲವೇ ದಿನಗಳಲ್ಲಿ ಗಣೇಶ ಚತುರ್ಥಿ ಹಬ್ಬ ಬರುತ್ತಿದ್ದು, ಈ ಸಂದರ್ಭದಲ್ಲಿ ಪಟಾಕಿ ಮಾರಾಟ ಮಾಡಲು ಭಾರಿ ಪ್ರಮಾಣದಲ್ಲಿ ಪಟಾಕಿಗಳನ್ನು ಶೇಖರಿಸಿಡಲಾಗಿತ್ತು ಎಂದು ಹೇಳಲಾಗಿದೆ.

    ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಯವರು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಇನ್ನು ಪಟಾಕಿ ಇಟ್ಟಿದ್ದ ಕಟ್ಟಡದ ಬಳಿ ವೆಲ್ಡಿಂಗ್​ ಕಾರ್ಯ ನಡೆಯುತ್ತಿತ್ತು.

    ಪರಿಣಾಮ ವೆಲ್ಡಿಂಗ್ ಮಾಡುವ ಸಂದರ್ಭದಲ್ಲಿ ಬೆಂಕಿ ಕಿಡಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಮೂರು ಗಂಟೆಗಳಿಂದ ಬೆಂಕಿ ನಂದಿಸಲು ನಿರಂತರ ಪ್ರಯತ್ನ ಮಾಡುತ್ತಿದ್ದು, ಆದರೆ, ಬೆಂಕಿ ಮಾತ್ರ ಆರುತ್ತಿಲ್ಲ.

    ನಿರಂತರವಾಗಿ ಪಟಾಕಿ ಸಿಡಿಯುತ್ತಿದೆ.
    ಪಟಾಕಿ ಗೋಡೌನ್ ನಲ್ಲಿ ಕೆಲಸ ಮಾಡುತ್ತಿದ್ದ ಮೂವರು ನಾಪತ್ತೆಯಾದ ಬಗ್ಗೆ ಮಾಹಿತಿ ಬಂದಿದ್ದು, ಪೋನ್ ಸ್ವಿಚ್ ಅಫ್ ಆದ ಹಿನ್ನಲೆ ಆತಂಕ ಹೆಚ್ಚಾಗಿದೆ.

    ಎಂಟು ಆಗ್ನಿಶಾಮಕ ವಾಹನದಿಂದ ಬೆಂಕಿ ನಂದಿಸಲು ಪ್ರಯತ್ನ ಮಾಡಲಾಗಿದೆ.

    ಅದೃಷ್ಟವಶಾತ್​ ಒಳಗಡೆ ಇದ್ದ ಸಿಲಿಂಡರ್ ಹೊರತಂದಿದ್ದಕ್ಕೆ ಯಾವುದೇ ಅವಘಡ ಸಂಭವಿಸಿಲ್ಲ.

    ಈ ಘಟನೆ ಹಾವೇರಿ ಗ್ರಾಮಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಘಟನಾ ಸ್ಥಳಕ್ಕೆ ಹಾವೇರಿ ಜಿಲ್ಲಾಧಿಕಾರಿ ರಘುನಂದಮೂರ್ತಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ‌

    ಗೋಡೌನ್​ಗೆ ಪರವಾನಗೆ ನೀಡಿದ್ದಾರೆಯೇ ಎಂಬ ತನಿಖೆ ನಡೆಯುತ್ತಿದ್ದು, ಪರವಾನಗೆ ಇರದೆ ಇದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply