KARNATAKA
ಹಾವೇರಿ: ಪಟಾಕಿ ಗೋದಾಮ್ ಸ್ಪೋಟ – 4 ಸಾವು- ತಲಾ 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ..!
ಹಾವೇರಿಯ ಆಲದಕಟ್ಟಿ ಗ್ರಾಮದಲ್ಲಿನ ಭೂಮಿಕಾ ಪಟಾಕಿ ಅಂಗಡಿ ಮತ್ತು ಗೋದಾಮ್ ಸ್ಪೋಟದಲ್ಲಿ ನಾಲ್ವರನ್ನು ಬಲಿ ಪಡೆದ ಘಟನೆ ಸಂಬಂಧಿಸಿದಂತೆ ಪಟಾಕಿ ಅಂಗಡಿ ಮಾಲೀಕ ಕುಮಾರ್ ಎಂಬಾತನನ್ನು ಬಂಧಿಸಿದ್ದಾರೆ.
ಹಾವೇರಿ : ಹಾವೇರಿಯ ಆಲದಕಟ್ಟಿ ಗ್ರಾಮದಲ್ಲಿನ ಭೂಮಿಕಾ ಪಟಾಕಿ ಅಂಗಡಿ ಮತ್ತು ಗೋದಾಮ್ ಸ್ಪೋಟದಲ್ಲಿ ನಾಲ್ವರನ್ನು ಬಲಿ ಪಡೆದ ಘಟನೆ ಸಂಬಂಧಿಸಿದಂತೆ ಪಟಾಕಿ ಅಂಗಡಿ ಮಾಲೀಕ ಕುಮಾರ್ ಎಂಬಾತನನ್ನು ಬಂಧಿಸಿದ್ದಾರೆ.
ಘಟನಾ ಸ್ಥಳಕ್ಕೆ ಹಾವೇರಿ ಜಿಲ್ಲಾ ಉಸ್ತುವರಿ ಸಚಿವರಾದ ಶಿವಾನಂದ ಪಾಟೀಲ್ ಇಂದು ಭೇಟಿ ನೀಡಲಿದ್ದಾರೆ.
ನಿನ್ನೆ ಮಧ್ಯಾಹ್ನ 12 ಗಂಟೆಯಿಂದ ಹೊತ್ತಿ ಉರಿಯಲು ಪ್ರಾರಂಭಿಸಿದ ಗೋದಾಮಿನಲ್ಲಿ ಹೊತ್ತಿಕೊಂಡಿದ್ದ ಬೆಂಕಿಯನ್ನು ಇಂದು ಮುಂಜಾನೆ 4 ಗಂಟೆ ವರೆಗೆ ಅಗ್ನಿ ಶಾಮಕ ಸಿಬ್ಬಂದಿ ನಿರಂತರ 16 ಗಂಟೆಗಳ ಕಾರ್ಯಾಚರಣೆ ನಡೆಸಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ದುರಂತದಲ್ಲಿ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ.
ಮೃತರನ್ನು 25 ವರ್ಷದ ದ್ಯಾಮಪ್ಪ ಓಲೇಕಾರ, 28 ವರ್ಷದ ರಮೇಶ್ ಬಾರ್ಕಿ ಮತ್ತು 22 ವರ್ಷದ ಶಿವಲಿಂಗ ಅಕ್ಕಿ ಎಂದು ಗುರುತಿಸಲಾಗಿದೆ.
ಸಾವನ್ನಪ್ಪಿರುವವರೆಲ್ಲ ಬ್ಯಾಡಗಿ ತಾಲೂಕಿನ ಕಾಟೇನಹಳ್ಳಿ ಗ್ರಾಮದ ನಿವಾಸಿಗಳೆಂದು ತಿಳಿದು ಬಂದಿದೆ.
ಘಟನೆಯಿಂದ ಸುಮಾರು ಒಂದೂವರೆ ಕೋಟಿ ರೂಪಾಯಿ ಮೌಲ್ಯದ ಪಟಾಕಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.
ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ ಐದು ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ.
ಪಟಾಕಿ ಸಿಡಿಮದ್ದು ಗೋದಾಮಿನಲ್ಲಿ ನಾಲ್ವರು ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ಅತ್ಯಂತ ದುಖದ ಸಂಗತಿಯಾಗಿದೆ.
ರಾಜ್ಯ ಸರ್ಕಾರ ಈ ಘಟನೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.