ಹಾವೇರಿ, ಏಪ್ರಿಲ್ 06: ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ಹಳೆಬಂಕಾಪುರ ಗ್ರಾಮದಲ್ಲಿ ಮನೆಯ ಮುಂದೆ ನಿಂತಿದ್ದ 2 ವರ್ಷದ ಮಗುವಿನ ಮೇಲೆ ಟ್ರ್ಯಾಕ್ಟರ್ ಹರಿದು ಮಗು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತ ಮಗುವನ್ನ ರಬೀಯಾ ದೊಡ್ಡಮನಿ 2 ವರ್ಷ ವಯಸ್ಸು ಎಂದು ಗುರುತಿಸಲಾಗಿದೆ. ಮನೆಯ ಮುಂದೆ ನಿಂತಿದ್ದ ಮಗುವಿನ ಮೇಲೆ ಏಕಾಏಕಿ ಟ್ರ್ಯಾಕ್ಟರ್ ಹರಿದು ಸಾವನ್ನಪ್ಪಿದೆ.
ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದಾನೆ. ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.