LATEST NEWS
ದುಷ್ಕರ್ಮಿಗಳಿಂದ ಹತ್ಯೆಗೀಡಾದ ದೀಪಕ್ ಮನೆಗೆ ಹೆಚ್ .ಡಿ ದೇವೇಗೌಡ ಭೇಟಿ

ದುಷ್ಕರ್ಮಿಗಳಿಂದ ಹತ್ಯೆಗೀಡಾದ ದೀಪಕ್ ಮನೆಗೆ ಹೆಚ್ .ಡಿ ದೇವೇಗೌಡ ಭೇಟಿ
ಮಂಗಳೂರು ಜನವರಿ 21:ಜನವರಿ 3 ರಂದು ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಕಾಟಿಪಳ್ಳದ ದೀಪಕ್ ರಾವ್ ಮನೆಗೆ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಭೇಟಿ ನೀಡಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಬಿ.ಎಂ. ಫಾರೂಕ್ ದೀಪಕ್ ಮನೆಯ ಪರಿಸ್ಥಿತಿಯನ್ನು ಮಾಜಿ ಪ್ರಧಾನಿ ದೇವೇಗೌಡರಿಗೆ ವಿವರಿಸಿದರು.
ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜೆಡಿಎಸ್ ವರಿಷ್ಠ ದೇವೇಗೌಡ ದೀಪಕ್ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ಬಂದಿದ್ದೆನೆ ಇಲ್ಲಿ ರಾಜಕೀಯ ವಿಷಯ ಮಾತನಾಡುವುದಿಲ್ಲ ಎಂದು ಹೇಳಿದರು. ನಾಳೆ ಸುದ್ದಿಗೋಷ್ಠಿಯ ಮೂಲಕ ಕರಾವಳಿಯ ರಾಜಕೀಯದ ಬಗ್ಗೆ ಮಾತನಾಡುತ್ತೇನೆ ಎಂದು ಮಾಜಿ ಪ್ರಧಾನಿ ದೇವೇಗೌಡ ತಿಳಿಸಿದರು.
