Connect with us

    KARNATAKA

    ಪುನೀತ್ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ – ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ

    ಬೆಂಗಳೂರು: ಇತ್ತೀಚೆಗೆ ನಮ್ಮನ್ನಗಲಿದ ಕನ್ನಡ ಚಿತ್ರರಂಗದ ಯುವರತ್ನ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.


    ಫಿಲ್ಮ್ ಚೇಂಬರ್ ಆಯೋಜಿಸಿದ್ದ ಪುನೀತ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪುನೀತ್ ರಾಜ್‍ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುತ್ತವೆ. ಅಪ್ಪು ಹೆಸರನ್ನು ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸು ಮಾಡುತ್ತೇನೆ ಎಂದು ಹೇಳಿದ್ದಾರೆ.

    ಕರ್ನಾಟಕ ರತ್ನ ಕರ್ನಾಟಕ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ. ಈ ಪ್ರಶಸ್ತಿಯನ್ನು ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆಯನ್ನು ನೀಡಿದ ವ್ಯಕ್ತಿಗಳಿಗೆ ನೀಡಲಾಗುತ್ತದೆ. ಈ ಪ್ರಶಸ್ತಿಯನ್ನು 1992ರಲ್ಲಿ ಪ್ರಾರಂಭಿಸಲಾಯಿತು. ಒಟ್ಟಾರೆ ಇಲ್ಲಿಯವರೆಗೆ 9 ವ್ಯಕ್ತಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply