Connect with us

    DAKSHINA KANNADA

    ‘ಆರಗ ಜ್ಞಾನೇಂದ್ರರಿಗೆ ಬುದ್ದಿ ಭ್ರಮಣೆ, ಪ್ರಹ್ಲಾದ್ ಜೋಷಿ ಜೈಲು ಸೇರುವ ಕಾಲ ಸನ್ನಿಹಿತ’ ; ಮಂಗಳೂರಿನಲ್ಲಿ ಬಿಜೆಪಿಗರ ಮೇಲೆ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ..!

    ಮಂಗಳೂರು : ‘ಆರಗ ಜ್ಞಾನೇಂದ್ರರಿಗೆ ಬುದ್ದಿ ಭ್ರಮಣೆ ಯಾಗಿದ್ದು ಸಚಿವ ಪ್ರಹ್ಲಾದ್ ಜೋಷಿ ಜೈಲು ಸೇರುವ ಕಾಲ ಸನ್ನಿಹಿತವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಬಿಜೆಪಿಗರ ಮೇಲೆ ಹರಿಹಾಯ್ದಿದ್ದಾರೆ.

    ಕೋವಿಡ್ ಹಗರಣದ ಕುರಿತು ನ್ಯಾಯಮೂರ್ತಿ ಡಿಕುನ್ಹಾ ಪ್ರಥಮ ವರದಿ ನೀಡಿದ್ದು ನಿಯಮ ಬದ್ದವಾಗಿ ಕಾನೂನು ಪ್ರಕಾರ ತನಿಖೆ ಮುಂದುವರಿಸುತ್ತೇವೆ. ಇದರಲ್ಲಿ ರಾಜಕೀಯ ದುರುದ್ದೇಶ ಏನಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್  ಸ್ಪಷ್ಟಪಡಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನ್ಯಾಯಮೂರ್ತಿ ಡಿಕುನ್ಹಾ ನೀಡಿದ ಪ್ರಥಮ ವರದಿಯಲ್ಲಿ ಕೋವಿಡ್ ಸಂದರ್ಭದ ಅವ್ಯವಹಾರಗಳು ಸ್ಪಷ್ಟವಾಗಿ ಉಲ್ಲೇಖ ಮಾಡಲಾಗಿದೆ. ಎರಡನೇ ಮತ್ತು ಕೊನೆಯ ವರದಿ ನೀಡಬೇಕಾಗಿದೆ. ಇದರಲ್ಲಿ ರಾಜಕೀಯ ದುರುದ್ದೇಶ ಅಥವಾ ದಾರಿ ತಪ್ಪಿಸುವ ತಂತ್ರ ಏನಿಲ್ಲ ಎಂದರು. ಜಸ್ಟೀಸ್ ಡಿ ಕುನ್ಹಾ ಅತ್ಯಂತ ಪ್ರಾಮಾಣಿಕ ನ್ಯಾಯಾಧೀಶರಾಗಿದ್ದಾರೆ. ಪ್ರಹ್ಲಾದ್ ಜೋಷಿ ಹೇಳಿಕೆಗೂ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಈಗಾಗಲೇ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರಿಗೆ ಇದರಿಂದ ಸಮಸ್ಯೆ ಆಗಿದೆ.ಜೋಷಿ ವಿರುದ್ಧ ಪ್ರಕರಣ ದಾಖಲಾದ್ರೆ ಅವರು ಜೈಲು ಸೇರುವ ಸಂದರ್ಭ ಬರಲೂ ಬಹುದು. ಈ ವಿಚಾರದಲ್ಲಿ ನ್ಯಾ.ಡಿಕುನ್ಹಾ ಏನು ಮಾಡುತ್ತಾರೆಂದು‌ ಗೊತ್ತಿಲ್ಲ. ನಾವು ಈ ಕುರಿತು ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ. ಒಬ್ಬ ಜಡ್ಜ್ ಬಗ್ಗೆ ಆ ರೀತಿ ಮಾತನಾಡುವಂತಿಲ್ಲ. ಈ ವರದಿಯಲ್ಲಿರುವುದು ನಾವು ಹುಟ್ಟು ಹಾಕಿರೋದಲ್ಲ. ನಮ್ಮ ಇಲಾಖೆಯಲ್ಲಿರುವ ಇರುವ ಮಾಹಿತಿ ಸಂಗ್ರಹಿಸಿ ತನಿಖೆ‌ ಮಾಡಿ ಅದರ ವರದಿ ನೀಡಿದ್ದಾರೆ. ಇದು ಐಟಿ, ಇ.ಡಿ ತರ ರಾಜಕೀಯ ಪ್ರೇರಿತ ಅಲ್ಲ ಎಂದ ಅವರು ಇ.ಡಿ, ಐ.ಟಿ ಗೆ ಖಾಲಿ ವಿರೋಧ ಪಕ್ಷ ಮಾತ್ರ ಕಾಣುತ್ತೆಎಂದು ಬಿಜೆಪಿಯನ್ನು ತರಾಟೆಗೆ ತಗೊಂಡರು.

    ಮಾಜಿ ಗೃಹ ಸಚಿವ ಆರಗಜ್ಞಾನೇಂದ್ರ ವಿರುದ್ದ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ
    ಮಾಜಿ ಗೃಹ ಸಚಿವ ಆರಗಜ್ಞಾನೇಂದ್ರ ವಿರುದ್ದವೂ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದು ಅರಗ ಜ್ಞಾನೇಂದ್ರ ಅತ್ಯಂತ ಲಘುವಾಗಿ ಮಾತನಾಡಿದ್ದು ನೋಡಿದ್ರೆ ಅವರಿಗೆ ಬುದ್ದಿ ಭ್ರಮಣೆ ಆಗಿದೆ. ನಾವೆಲ್ಲಾ ಹುಚ್ಚಾಸ್ಪತ್ರೆಯಲ್ಲಿ ಇರಬೇಕೆಂದು ಅವರು ಹೇಳಿದ್ದಾರೆ. ಆದ್ರೆ ನಮ್ಮನ್ನು ಆರಿಸಿದವರು ಜನರು. ಅವರ ಮೇಲಿರುವ ಆರೋಪಗಳಿಗೆ ಅವರಿಗೆ ಉತ್ತರ ನೀಡೋದಕ್ಕೆ ಆಗ್ತಿಲ್ಲ ಮತ್ತು ಯಾವಾಗ ಉತ್ತರ ಕೊಡೋದಕ್ಕೆ ಆಗಲ್ಲ ಆಗ ಈ ರೀತಿಯ ವ್ಯಾಕರಣ ಹೊರ ಬರುತ್ತೆ. ಆಯೋಗದ ವರದಿಯಲ್ಲಿ ಬಂದಿರುವ ಬಗ್ಗೆ ಮೊದಲು ಉತ್ತರ ನೀಡಲಿ. ಹಿಂದಿನ ಆರೋಗ್ಯ ಸಚಿವರ ಬಗ್ಗೆ ವರದಿಯಲ್ಲೂ ಸ್ಪಷ್ಟವಾಗಿ ಉಲ್ಲೇಖ ಮಾಡಲಾಗಿದೆ. ಅವರನ್ನು ಪ್ರಾಷಿಕ್ಯೂಷನ್ ಮಾಡುವ ಬಗ್ಗೆ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕೆಂದು ಉಲ್ಲೇಖಿಸಲಾಗಿದೆ. ಇಡೀ ಯೋಜನೆಗಳಲ್ಲಿ ಮೋಸ ಆಗಿದ್ದು ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮ ಮೀರಲಾಗಿದೆ. ಎಲ್ಲವೂ ವರದಿಯಲ್ಲಿ ಸ್ಪಷ್ಟವಾಗಿದ್ದು ಈ ವಿಚಾರವನ್ನು ರಾಷ್ಟ್ರೀಯ ಮಟ್ಟದಲ್ಲಿ ಕೊಂಡೊಯ್ಯುವ ಬಗ್ಗೆ ಪಕ್ಷ ತೀರ್ಮಾನ ಮಾಡುತ್ತೆ. ಬಿಜೆಪಿಯವರಿಗೆ ಮಾತನಾಡುವ ನೈತಿಕತೆ ಇಲ್ಲ.ಮೋದಿಯವರು ಸಣ್ಣ ಸಣ್ಣ ವಿಚಾರವನ್ನು ಚುನಾವಣೆ ಸಂದರ್ಭ ಮಾತನಾಡುತ್ತಾರೆ. ಅದಕ್ಕೆ ಯಾವುದೇ ದಾಖಲೆಗಳು ಇರೋದಿಲ್ಲ ಮತ್ತು ಅವರಿಗೆ ಯಾವುದೇ ಲಂಗು ಲಗಾಮು ಇಲ್ಲ ಎಂದು ವಾಗ್ದಾಳಿ ನಡೆಸಿದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *