ರಸ್ತೆ ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಆರೋಗ್ಯ ಸಚಿವ

ಉಡುಪಿ ಸೆಪ್ಟೆಂಬರ್ 28: ಆರೋಗ್ಯ ಸಚಿವ ಶ್ರೀರಾಮುಲು ಅವರು ಉಡುಪಿಯಲ್ಲಿ ನಡೆದ ಅಪಘಾತದಲ್ಲಿ ಗಾಯಾಳುಗಳಿಗೆ ನೀರು ಕುಡಿಸಿ ಸಮಾಧಾನಪಡಿಸಿದ ಸಚಿವ ಶ್ರೀರಾಮಲು ನಂತರ ಶಾಸಕರ ಕಾರಿನಲ್ಲಿ ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟೇಶ್ವರದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಿಕ್ಷಾ, ಡಿವೈಡರಿಗೆ ಡಿಕ್ಕಿಹೊಡೆದು ಪಲ್ಟಿಯಾಗಿತ್ತು. ರಿಕ್ಷಾದಲ್ಲಿದ್ದ ಇಬ್ಬರು ಮಹಿಳೆಯರು ಗಾಯಗೊಂಡು ನರಳಾಡುತ್ತಿದ್ದರು. ನೋಡನೋಡುತ್ತಿದ್ದಂತೆ ಆರೋಗ್ಯ ಸಚಿವರು ಸ್ಥಳಕ್ಕೆ ಬಂದರು. ಕುಂದಾಪುರದಲ್ಲಿ ನಡೆಯಬೇಕಿದ್ದ ಸರ್ಕಾರಿ ತಾಲೂಕು ಆಸ್ಪತ್ರೆ ಉದ್ಘಾಟನೆಗೆ ತೆರಳುತ್ತಿದ್ದ ಸಚಿವರು ಕಾರ್ಯಕ್ರಮಕ್ಕೆ ಹೋಗೋದನ್ನ ಬಿಟ್ಟು ಗಾಯಾಳುಗಳಿಗೆ ಸ್ಪಂದಿಸಿದ್ದಾರೆ.

ಸ್ವತಹ ತಾವೇ ಗಾಯಾಳು ಅತ್ತೆ ಹಾಗೂ ಸೊಸೆಯನ್ನ ಸಾರ್ವಜನಿಕರೊಂದಿಗೆ ಸೇರಿಕೊಂಡು ಉಡುಪಿ ಶಾಸಕ ರಘುಪತಿ ಭಟ್ ಅವರ ಇನ್ನೋವಾ ಕಾರಿನಲ್ಲಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಸೇರಿಸಿ ಕುಂದಾಪುರಕ್ಕೆ ತೆರಳಿದರು. ಕೋಟೇಶ್ವರದಲ್ಲಿ ನಡೆದ ಈ ಅಪಘಾತದಲ್ಲಿ ಗಾಯಾಳುಗಳಿಗೆ ಈ ರೀತಿ ಸ್ಪಂದಿಸುವ ಮೂಲಕ ಶ್ರೀರಾಮಲು ಮಾನವೀಯತೆಗೆ ಸಾಕ್ಷಿಯಾದರು.

VIDEO

Facebook Comments

comments