KARNATAKA
ಮಾಜಿ ಸಂಸದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಾಣ ಹೃದಯಾಘಾತದಿಂದ ನಿಧನ
ಚಾಮರಾಜನಗರ ಮಾರ್ಚ್ 11: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ಇದೀಗ ಕಾಂಗ್ರೇಸ್ ಪಕ್ಷದ ಮುಖಂಡ ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೈಸೂರಿನಲ್ಲಿ ಇಂದು ಮುಂಜಾನೆ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಒಂಟಿಕೊಪ್ಪಲಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೂ ಅವರು ಬದುಕುಳಿದಿಲ್ಲ. ಧ್ರುವನಾಯಣ ಅವರು ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಚಾಮರಾಜನಗರ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಅವರು, ಎರಡು ಬಾರಿ ಶಾಸಕರಾಗಿಯೂ ಸೇವೆ ಸಲ್ಲಿಸಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ವಿ. ಶ್ರೀನಿವಾಸ ಪ್ರಸಾದ್ ಅವರ ಎದುರು ಸೋಲು ಕಂಡಿದ್ದ ಅವರು, ಸದ್ಯ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದರು.