Connect with us

    LATEST NEWS

    ಹೃದಯಾಘಾತಕ್ಕೆ ನರ್ಸಿಂಗ್ ವಿಧ್ಯಾರ್ಥಿನಿ ಸುಮಾ ಸಾವು…!!

    ಮಂಗಳೂರು ಅಗಸ್ಟ್ 14 : ಹೃದಯಾಘಾತದಿಂದಾಗಿ ನರ್ಸಿಂಗ್ ವಿಧ್ಯಾರ್ಥಿನಿಯೊಬ್ಬಳು ಸಾವನಪ್ಪಿರುವ ಫಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ.


    ಮೃತ ವಿದ್ಯಾರ್ಥಿನಿಯನ್ನು ಸುಮಾ(19) ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ಸುಮಾ ಅನಾರೋಗ್ಯದ ಕಾರಣ ಚಿಕಿತ್ಸೆ ಪಡೆದು ಮನೆಯಲ್ಲಿದ್ದಳು.
    ಆಗಸ್ಟ್ 9 ರಂದು ಅನಾರೋಗ್ಯದ ಕಾರಣ ಸ್ಥಳೀಯ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಳು. ಬಳಿಕ ಅಗಸ್ಟ್ 11ರಂದು ಅನಾರೋಗ್ಯ ಜಾಸ್ತಿಯಾದ ಕಾರಣ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖಳಾಗಿದ್ದಳು.

    ಆದರೆ ಆ.13 ರಂದು ಸಂಜೆ ಮತ್ತೆ ಆಕೆ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಲೋ ಬಿಪಿಯಾಗಿ (Low BP) ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *