BANTWAL
ಮಲಗಿದ್ದಲ್ಲೇ ಹೃದಯಾಘಾತದಿಂದ ಕಾವಳಪಡೂರು ಯುವತಿ ಮಿತ್ರಾ ಶೆಟ್ಟಿ ನಿಧನ
ಬಿ.ಸಿ.ರೋಡ್ ಅಗಸ್ಟ್ 31 : ಯುವತಿಯೋರ್ವಳು ಮಲಗಿದ್ದಲ್ಲೇ ಮೃತಪಟ್ಟ ಘಟನೆ ವಗ್ಗ ಸಮೀಪದ ಮದ್ವ ಎಂಬಲ್ಲಿ ನಡೆದಿದೆ.
ಕಾವಳಮೂಡುರು ಗ್ರಾಮದ ಪುಳಿಮಜಲು ನಿವಾಸಿ ರಾಜ ಅವರ ಪುತ್ರಿ ಮಿತ್ರ ಶೆಟ್ಟಿ (23) ಮೃತಪಟ್ಟ ಯುವತಿ. ರಾತ್ರಿ ಊಟ ಮಾಡಿ ಮಲಗಿದ ಯುವತಿ ಬೆಳಗ್ಗೆ ನೋಡುವಾಗ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದು, ಸಾವಿಗೆ ಹೃದಯಾಘಾತ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ. ನಂತರ ಮೃತ ದೇಹವನ್ನು ಹೆಚ್ಚಿನ ಪರೀಕ್ಷೆಗಾಗಿ ದೇರಳಕಟ್ಟೆ ಆಸ್ಪತ್ರೆಗೆ ಕರೆದೊಯ್ಯ ಲಾಗಿತ್ತು. ಮೃತರಿಗೆ ತಂದೆ, ತಾಯಿ, ಸಹೋದರ ಮಿತ್ರಾ ಶೆಟ್ಟಿ ಇದ್ದಾರೆ.
ಮಂಗಳವಾರ ರಾತ್ರಿ ಊಟ ಮುಗಿಸಿ ತಾಯಿ ಜತೆ ಮಲಗಿದ್ದ ಅವರು ಬೆಳಗ್ಗೆ ತುಂಬಾ ಹೊತ್ತಾದರೂ ಎಳದಿರುವುದನ್ನು ಗಮನಿಸಿದ ತಾಯಿ ಎಬ್ಬಿಸುವಾಗ ಅವರು ಮೃತಪಟ್ಟಿರುವುದು ಗಮನಕ್ಕೆ ಬಂದಿದೆ. ಮೂಲತಃ ಕಾವಳಮೂಡೂರು ಪುಳಿಮಜಲಿನ ನಿವಾಸಿಯಾಗಿದ್ದ ಮಿತ್ರಾ ಸ್ಥಳೀಯ ಸಂಘ, ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು.