LATEST NEWS
ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ವ್ಯಕ್ತಿ ಸಾವು

ಸುರತ್ಕಲ್ ಫೆಬ್ರವರಿ 22 : ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದಾಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಇಡ್ಯಾ ಬೀಚ್ ನಲ್ಲಿ ಬುಧವಾರ ವರದಿಯಾಗಿದೆ. ಮೃತಪಟ್ಟವರನ್ನು ಮೂಲತಃ ಕುಳಾಯಿ ನಿವಾಸಿ ಅಸ್ಗರ್ (32) ಎಂದು ತಿಳಿದು ಬಂದಿದೆ.
ಚಾಲಕ ವೃತ್ತಿ ಮಾಡುತ್ತಿದ್ದ ಅಸ್ಗರ್ ಬುಧವಾರ ಮಧ್ಯಾಹ್ನ ಇಡ್ಯಾ ಮಸೀದಿ ಸಮೀಪದ ಬೀಚ್ ನಲ್ಲಿ ಸ್ನಾನಕೆಂದು ಬಂದಿದ್ದರು ಎನ್ನಲಾಗಿದೆ. ಇವರು ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
