KARNATAKA
ದಾವಣಗೆರೆ – ಹೃದಯಾಘಾತಕ್ಕೆ 22 ವರ್ಷ ವಯಸ್ಸಿನ ಕಾಲೇಜು ವಿಧ್ಯಾರ್ಥಿ ಬಲಿ

ದಾವಣಗೆರೆ ಜುಲೈ 09: ಕರ್ನಾಟಕದಲ್ಲಿ ಹೃದಯಾಘಾತದಿಂದ ಸಾವನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇದೀಗ ಕಾಲೇಜು ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟ ಘಟನೆ ದಾವಣಗೆರೆಯ ಜಯನಗರದಲ್ಲಿ ನಡೆದಿದೆ.
ಉದ್ಯಮಿ ರೇಖಾ ಮುರ್ಗೇಶ್ ಪುತ್ರ ಅಕ್ಷಯ್ (22) ಹೃದಯಘಾತಕ್ಕೆ ಮೃತಪಟ್ಟಿದ್ದಾನೆ. ಅಕ್ಷಯ್ ಇದ್ದಕ್ಕಿದ್ದಂತೆ ಮನೆಯಲ್ಲಿಯೇ ಕುಸಿದು ಬಿದ್ದಿದ್ದ. ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ಸಾಗಿಸಿದ ಕೆಲ ಕ್ಷಣಗಳಲ್ಲಿ ಅಕ್ಷಯ್ ಮೃತಪಟ್ಟಿದ್ದಾನೆ. ಕಳೆದು ಮೂರು ತಿಂಗಳಲ್ಲಿ ಕೇವಲ ದಾವಣಗೆರೆ ಜಿಲ್ಲಾ ಆಸ್ಪತ್ರೆ ಒಂದರಲ್ಲಿಯೇ 75 ಕ್ಕೂ ಹೆಚ್ಚು ಜನ ಹೃದಯಾಘಾತದಿಂದ ಮೃತಪಟ್ಟ ವಿಚಾರ ಬೆಳಕಿಗೆ ಬಂದಿದೆ.

ಇತ್ತ ಯುಪಿಎಸ್‌ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಯುವತಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಧಾರವಾಡದ ಪುರೋಹಿತ್ ನಗರದಲ್ಲಿ ನಡೆದಿದೆ. 26 ವರ್ಷ ಪ್ರಾಯದ ಜೀವಿತಾ ಕುಸಗೂರ ಎಂಬ ಯುವತಿ ಮೃತಪಟ್ಟವರು. ನಿನ್ನೆ ಬೆಳಗ್ಗೆ ಮನೆಯಲ್ಲಿ ತಲೆ ಸುತ್ತು ಬರುತ್ತಿದೆ ಎಂದು ಯುವತಿ ಸುಸ್ತಾಗಿ ಕುಳಿತಿದ್ದರು. ನಂತರ ಕುಟುಂಬದವರು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದರು. ಆದರೆ, ಮಾರ್ಗ ಮಧ್ಯದಲ್ಲೇ ಯುವತಿ ಕೊನೆಯುಸಿರೆಳೆದಿದ್ದಾರೆ. ಆಸ್ಪತ್ರೆಗೆ ಹೋಗಿ ವೈದ್ಯರಿಗೆ ತೋರಿಸಿದಾಗ ಹೃದಯಾಘಾತದಿಂದ ಸಾವಾಗಿದೆ ಎಂದು ವೈದ್ಯರು ಘೋಷಣೆ ಮಾಡಿದ್ದಾರೆ. ಎಂಎಸ್ಸಿ ಅಗ್ರಿ ಓದಿದ್ದ ಜೀವಿತಾ ಯುಪಿಎಸ್‌ಸಿ ಕನಸು ಹೊಂದಿದ್ದು, ಪರೀಕ್ಷೆಗಾಗಿ ತಯಾರಿ ನಡೆಸುತ್ತಿದ್ದರು. ಇವರ ತಂದೆ ಶಾಲೆ ಶಿಕ್ಷಕರಾಗಿದ್ದಾರೆ. ಉನ್ನತ ಹುದ್ದೆಯ ಗುರಿ ಇರಿಸಿಕೊಂಡಿದ್ದ ಯುವತಿ ಚಿಕ್ಕ ವಯಸ್ಸಿನಲ್ಲೇ ನಿಧನರಾಗಿದ್ದು, ಕುಟುಂಬವು ಶೋಕ ಸಾಗರದಲ್ಲಿ ಮುಳುಗಿದೆ.
2 Comments