Connect with us

    DAKSHINA KANNADA

    34 ನೆಕ್ಕಿಲಾಡಿ ಗ್ರಾಮ ಪಂಚಾಯತ್ ಪ್ರಭಾರ ಪಿಡಿಓ ಹೃದಯಾಘಾತದಿಂದ ನಿಧನ

    ಪುತ್ತೂರು ಜೂನ್ 27: ಹೃದಯಾಘಾತಕ್ಕೆ 34 ನೆಕ್ಕಿಲಾಡಿ ಗ್ರಾಮ ಪಂಚಾಯತ್ ನಲ್ಲಿ ಪ್ರಭಾರ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಕುಮಾರಯ್ಯ (46) ನಿಧನರಾಗಿದ್ದಾರೆ.


    ಬೆಳ್ತಂಗಡಿಯ ಕುದ್ರಡ್ಕದ ನಿವಾಸಿಯಾಗಿರುವ ಇವರು ಒಂದೂವರೆ ವರ್ಷಗಳ ಹಿಂದೆ ಗ್ರಾಮಪಂಚಾಯತ್ ಕಾರ್ಯದರ್ಶಿಯಾಗಿ ಬಡ್ತಿ ಹೊಂದಿದ್ದರು. ಕುಮಾರಯ್ಯ ಅವರಿಗೆ ಎರಡು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು ಈ ಹಿನ್ನಲೆ ರಜೆಯಲ್ಲಿದ್ದರು. ಆದರೆ ಭಾನುವಾರ ಎದೆನೋವು ಕಾಣಿಸಿಕೊಂಡಿದ್ದು, ಮನೆಯವರು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸೋಮವಾರ ಬೆಳಗ್ಗಿನ ಜಾವ ನಿಧರಾಗಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply