ಖಾಸಗಿ ಬಸ್ ನಲ್ಲಿ ಹೃದಯಾಘಾತದಿಂದ ಪೊಲೀಸ್ ಸಿಬ್ಬಂದಿ ಸಾವು
ಉಡುಪಿ ಜೂನ್ 4: ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿಯೊಬ್ಬರು ಖಾಸಗಿ ಬಸ್ ನಲ್ಲಿ ಸಾವನಪ್ಪಿದ ಘಟನೆ ನಡೆದಿದೆ.
ಮೃತಪಟ್ಟವರನ್ನು ಮಡಾಮಕ್ಕಿ ನಿವಾಸಿ ವಸಂತ ಪೂಜಾರಿ ಎಂದು ಗುರುತಿಸಲಾಗಿದೆ.
ವಸಂತ ಪೂಜಾರಿ ಅವರು ಕರ್ತವ್ಯ ಮುಗಿಸಿ ಮನೆಗೆ ವಾಪಾಸಾಗುತ್ತಿದ್ದಾಗ ಕೋಟ ಠಾಣೆ ವ್ಯಾಪ್ತಿಯ ಸಾಯ್ಬರಕಟ್ಟೆ ಜಂಕ್ಷನ್ ಬಳಿ ಈ ಘಟನೆ ನಡೆದಿದೆ. ಬಸ್ ನಲ್ಲಿ ಪ್ರಯಾಣಿಸುತ್ತಿರುವಾಗ ವಸಂತ ಪೂಜಾರಿ ಅವರಿಗೆ ಹೃದಯಾಘಾತವಾಗಿತ್ತು, ಕೂಡಲೇ ಸ್ಥಳೀಯ ವೈದ್ಯರ ಬಳಿ ಹೋಗುವ ಮೊದಲೇ ಮೃತಪಟ್ಟಿದ್ದರು.