ಕೋಲಾರ, ಮಾರ್ಚ್ 18: ಪೊಲೀಸ್ ಹೆಡ್ ಕಾನ್ಸ್ಟೇಬರ್ ಒಬ್ಬರು ಹೃದಯಾಘಾತದಿಂದ ಸಾವನಪ್ಪದ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರ ತಾಲೂಕಿನ ಸೀಸಂದ್ರ ಗ್ರಾಮದ ನಿವಾಸಿ ವೆಂಕಟರಮಣಪ್ಪ (50) ಮೃತಪಟ್ಟ ದುರ್ದೈವಿ. ಇವರು ಕೆಜಿಎಫ್ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಊರಿಗಾಂ ಪೊಲೀಸ್ ಠಾಣೆಯಲ್ಲಿ ಮುಖ್ಯಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇಂದು ಮುಂಜಾನೆ ಮನೆಯಲ್ಲಿದ್ದಾಗಲೇ ಅವರಿಗೆ ಹಠಾತ್ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತಾದರೂ, ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.