DAKSHINA KANNADA
ಹೃದಯಾಘಾತದಿಂದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಯು.ಡಿ. ಶೇಖರ್ ನಿಧನ

ಪುತ್ತೂರು ನವೆಂಬರ್ 03: ಹೃದಯಾಘಾತದಿಂದಾಗಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಯು.ಡಿ. ಶೇಖರ್ ರವರು ನಿಧನರಾಗಿದ್ದಾರೆ.
ಇಂದು ಬೆಳಿಗ್ಗೆ ಅರಂತೋಡಿನ ಅವರ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಮನೆಯವರು ಸುಳ್ಯ ಆಸ್ಪತ್ರೆಗೆ ಕರೆತರಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟದ್ದಾರೆ ಎಂದು ತಿಳಿದು ಬಂದಿದೆ. ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ದೀರ್ಘ ಕಾಲ ಸೇವೆ ಸಲ್ಲಿದ್ದ ಶೇಖರ್ ರವರು ಬಳಿಕ ಸುಬ್ರಹ್ಮಣ್ಯ ಗ್ರಾ.ಪಂ. ಪಿಡಿಒ ಆಗಿ ವರ್ಗಾವಣೆಯಾಗಿದ್ದರು. ಮೃತರು ಪತ್ನಿ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗೀತಾ ಶೇಖರ್ , ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
