ಬೆಂಗಳೂರು ನವೆಂಬರ್ 03: ಸಾಕು ನಾಯಿಯನ್ನು ಲಿಪ್ಟ್ ನಲ್ಲಿ ಬಟ್ಟೆ ಒಗೆದ ಹಾಗೆ ಬಡಿದು ಕೊಲೆ ಮಾಡಿದ ಮನೆ ಕೆಲಸದಾಕೆಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಾಗಲೂರಿನ ಅಪಾರ್ಟ್‌ಮೆಂಟ್‌ವೊಂದರ ಲಿಫ್ಟ್‌ನಲ್ಲಿ ನಾಯಿಮರಿಯನ್ನು ನೆಲಕ್ಕೆ ಬಡಿದು ಭೀಕರವಾಗಿ ಕೊಲೆ ಮಾಡಿದ್ದ ಆರೋಪದ ಪುಷ್ಪಲತಾ ಎಂಬ ಮಹಿಳೆಯನ್ನು ಅರೆಸ್ಟ್ ಮಾಡಲಾಗಿದೆ.

ಕೆ.ಆರ್. ರಾಶಿಕಾ ಅವರು ನೀಡಿದ ದೂರು ಆಧರಿಸಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 325 ಅಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು. ‘ಗೂಫಿ’ ಹೆಸರಿನ ನಾಯಿಯನ್ನು ಮನೆ ಕೆಲಸದಾಕೆ ಪುಷ್ಪಲತಾ ನೆಲಕ್ಕೆ ಬಡಿದು, ಕತ್ತು ಬಿಗಿದು ಕೊಲೆ ಮಾಡಿರುವುದು ಲಿಫ್ಟ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
READ THIS ALSO ಪರ್ಪುಂಜದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡ ಮಗುವನ್ನು ಎದೆಗಪ್ಪಿಕೊಂಡು ಆರೈಕೆ ಮಾಡಿದ ಚಂದ್ರಪ್ರಭಾ ಗೌಡ
ಕೆಲಸದಾಕೆಯ ಕೃತ್ಯವನ್ನು ಮನೆ ಮಾಲೀಕರಾದ ರಾಶಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ಧಾರೆ. ಪುಷ್ಪಲತಾ ಅವರ ಕೃತ್ಯಕ್ಕೆ ಪ್ರಾಣಿ ಪ್ರಿಯರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಾಕು ನಾಯಿ ನೋಡಿಕೊಳ್ಳಲು ಪುಷ್ಪಾಲತಾ ಅವರನ್ನು ನೇಮಿಸಿಕೊಳ್ಳಲಾಗಿತ್ತು. ಅಕ್ಟೋಬರ್ 31ರಂದು ನಾಯಿಯನ್ನು ವಾಕಿಂಗ್‌ಗೆ ಕರೆದೊಯ್ದಿದ್ದ ಪುಷ್ಪಲತಾ ಲಿಫ್ಟ್‌ನೊಳಗೆ ಬರುತ್ತಿದ್ದಂತೆ ನೆಲಕ್ಕೆ ಬಡಿದು, ಬೆಲ್ಟ್‌ನಿಂದ ಕತ್ತು ಬಿಗಿದು ಸಾಯಿಸಿದ್ದಾರೆ. ಬಳಿಕ ನಾಯಿಯ ಕಳೇಬರವನ್ನು ಎಳೆದು ತಂದು ಇದ್ದಕ್ಕಿದ್ದಂತೆ ಸಾವನ್ನಪ್ಪಿತು ಎಂದು ಆರೋಪಿ ಸುಳ್ಳು ಹೇಳಿದ್ದರು. ಅನುಮಾನಗೊಂಡು ಮಾರನೇ ದಿನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ಮಾಡಿದಾಗ ಕೆಲಸದಾಕೆಯ ಕೃತ್ಯ ಗೊತ್ತಾಗಿದೆ ಎಂದು ಮೂಲಗಳು ಹೇಳಿವೆ.



