FILM
ಹೀಟ್ ಸ್ಟ್ರೋಕ್ ಗೆ ಬಾಲಿವುಡ್ ನಟ ಶಾರುಖ್ ಖಾನ್ ಆಸ್ಪತ್ರೆಗೆ ದಾಖಲು

ಅಹಮದಾಬಾದ್ ಮೇ 22 : ಉತ್ತರಭಾರತದಲ್ಲಿ ಹೀಟ್ ಸ್ಟ್ರೋಕ್ ಹೆಚ್ಚಾಗಿದ್ದು, ಇದೀಗ ಬಿಸಿಲಾಘಾತಕ್ಕೆ ಒಳಗಾಗಿ ಅಸ್ವಸ್ಥರಾಗಿದ್ದ ಬಾಲಿವುಡ್ ನಟ ಶಾರುಕ್ ಖಾನ್ ಅವರನ್ನು ಬುಧವಾರ ಅಹಮದಾಬಾದ್‌ನ ಕೆ ಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವರದಿ ಪ್ರಕಾರ, ಮಂಗಳವಾರ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ಐಪಿಎಲ್ ಪಂದ್ಯದ ವೇಳೆ ಬಿಸಿ ಗಾಳಿಯ ಪರಿಸ್ಥಿತಿಯಿಂದಾಗಿ ಶಾರುಕ್ ಅನಾರೋಗ್ಯಕ್ಕೆ ಒಳಗಾಗಿದ್ದಾರೆ.
ಐಪಿಎಲ್ 2024ರ ಮೊದಲ ಪ್ಲೇಆಫ್ ಪಂದ್ಯದಲ್ಲಿ ಎಸ್‌ಆರ್‌ಎಚ್ ವಿರುದ್ಧ ಕೆಕೆಆರ್ ತಂಡವನ್ನು ಬೆಂಬಲಿಸಲು ಶಾರುಕ್ ಖಾನ್ ಅಹಮದಾಬಾದ್‌ಗೆ ಭೇಟಿ ನೀಡಿದ್ದರು.
