LATEST NEWS
ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯಲ್ಲಿ 24 ಗಂಟೆ ಅವಧಿಯಲ್ಲಿ ಬಿಸಿ ಗಾಳಿ ಸಾಧ್ಯತೆ…!!
ಮಂಗಳೂರು ಮಾರ್ಚ್ 10:ಬೇಸಿಗೆ ಆರಂಭದಲ್ಲೇ ಕರಾವಳಿಯಲ್ಲಿ ಬಿಸಿಲ ಬೇಗೆ ಪ್ರಾರಂಭವಾಗಿದ್ದು, ಬಿಸಿಲ ಜೊತೆ ಇದೀಗ ಬಿಸಿ ಗಾಳಿ ಅಬ್ಬರ ಹೆಚ್ಚಾಗುತ್ತಿದ್ದು. ಮಂಗಳೂರು ಸೇರಿದಂತೆ ಕರಾವಳಿಯ ಕೆಲವು ಪ್ರದೇಶಗಳಲ್ಲಿ ಮುಂದಿನ 24 ಗಂಟೆ ಅವಧಿಯಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಇಂದು ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಅದು ಎಚ್ಚರಿಕೆ ನೀಡಿದೆ. ಕಳೆದ ಕೆಲವು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಹೆಚ್ಚಳವಾಗಿದೆ.
ಮೊನ್ನೆಯಷ್ಠೇ ಗರಿಷ್ಠ ತಾಪಮಾನ ಮಂಗಳೂರಿನಲ್ಲಿ ದಾಖಲಾಗಿತ್ತು.ಇದರ ಬೆನ್ನಲ್ಲೇ ಇದೀಗ ಹವಾಮಾನ ಇಲಾಖೆ ಬಿಸಿ ಗಾಳಿ ಬಗ್ಗೆ ಎಚ್ಚರಿಕೆ ನೀಡಿದೆ. ಇದೇ ಸಂದರ್ಭ ಮಾರ್ಚ್ 13 ಮತ್ತು 14ರಂದು ಉತ್ತರ ಕನ್ನಡ, ಉಡುಪಿ ಮತ್ತು ಒಳನಾಡು ಪ್ರದೇಶಗಳಾದ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆ ಸುರಿಯುವ ಸಾಧ್ಯತೆನೂ ಇದೆ ಎಂದು ಹವಮಾನ ಇಲಾಖೆ ಹೇಳಿದೆ.