LATEST NEWS
ಅಗಸ್ಟ್ 12ರವರೆಗೆ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ….!!

ಮಂಗಳೂರು ಅಗಸ್ಟ್ 10: ಕರಾವಳಿಯಲ್ಲಿ ಮತ್ತೆ ಮಳೆ ಆರ್ಭಟ ಪ್ರಾರಂಭವಾಗಿದ್ದು, ಇಂದಿನಿಂದ 3 ದಿನಗಳ ಕಾಲ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಆಗಸ್ಟ್ 12ರವರೆಗೂ ಕರ್ನಾಟಕದ ಕರಾವಳಿ , ಮಲೆನಾಡು , ಕೊಡಗು ಭಾಗಗಳಲ್ಲಿ ಮಳೆ ಹೆಚ್ಚಾಗಲಿದೆ.
ಉತ್ತರ ಒಳನಾಡಿನ ಕೆಲವೆಡೆ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಜತೆಗೆ ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಂಭವ ಇದೆ. ಗರಿಷ್ಠ 29 ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.