Connect with us

    National

    ವಾಹನ ಚಾಲನೆ ಸಂದರ್ಭದಲ್ಲಿ ಮೊಬೈಲ್ ಬಳಸಿದಲ್ಲಿ 10000 ದಂಡ..

    ಲಕ್ನೋ. ಜುಲೈ 31: ವಾಹನ ಚಲಾಯಿಸುವ ಸಂದರ್ಭದಲ್ಲಿ ಮೊಬೈಲು ಬಳಸುವವರು ಇನ್ನು ಮುಂದೆ 10 ಸಾವಿರ ರೂಪಾಯಿಗಳನ್ನು ಜೇಬಿನಲ್ಲಿ ಇರಿಸಿಕೊಳ್ಳೋದು ಉತ್ತಮ. ಹೆಚ್ಚುತ್ತಿರುವ ಅಫಘಾತಗಳನ್ನು ತಡೆಯಲು ಹಾಗೂ ರಸ್ತೆ ಸುರಕ್ಷತಾ ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಹಿನ್ನಲೆಯಲ್ಲಿ ಉತ್ತರಪ್ರದೇಶ ಸರಕಾರ ಈ ಆದೇಶವನ್ನು ಹೊರಡಿಸಿದೆ.

    ಇಂದು ಹೊರಡಿಸಿದ ಹೊಸ ಆದೇಶದಲ್ಲಿ ವಾಹನ ಚಲಾಯಿಸುವಾಗ ಮೊಬೈಲು ಬಳಸುವವರಿಗೆ 10 ಸಾವಿರ ರೂಪಾಯಿ ದಂಡ ವಿಧಿಸಲು ತೀರ್ಮಾನಿಸಲಾಗಿದೆ. ಅಲ್ಲದೆ ದ್ವಿಚಕ್ರ ವಾಹನ ಸವಾರ ಹಾಗೂ ಹಿಂಬದಿ ಸವಾರನೂ ಹೆಲ್ಮೆಟ್ ಧರಿಸುವುದನ್ನೂ ಕಡ್ಡಾಯ ಮಾಡಲಾಗಿದೆ.

    ಸೆಪ್ಟಂಬರ್ ನಲ್ಲಿ ಜಾರಿಗೆ ಬಂದ ಹೊಸ ಮೋಟರ್ ವೆಹಿಕಲ್ ಆಕ್ಟ್ ಪ್ರಕಾರ ವಾಹನ ಚಾಲನೆ ಸಂದರ್ಭದಲ್ಲಿ ಮೊಬೈಲ್ ಬಳಕೆ, ಅಂಬ್ಯುಲೆನ್ಸ್ ಹಾಗೂ ತುರ್ತು ಅಗತ್ಯದ ವಾಹನಗಳ ಸಂಚಾರಕ್ಕೆ ಅಡ್ಡಿ ಮಾಡುವುದು, ಮದ್ಯಪಾನ ಮಾಡಿ ವಾಹನ ಚಾಲನೆ ಸೇರಿದಂತೆ ಹಲವು ಕೃತ್ಯಗಳಿಗೆ ಹೆಚ್ಚಿನ ದಂಡ ವಿಧಿಸಲು ತೀರ್ಮಾನಿಸಲಾಗಿತ್ತು. ಆದರೆ ಕೆಲವು ರಾಜ್ಯಗಳು ಈ ದಂಡವನ್ನು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಕಡಿಮೆ ಮಾಡಿತ್ತು. ಆದರೆ ಉತ್ತರಪ್ರದೇಶ ಸರಕಾರ ಇಂಥ ಕೃತ್ಯಗಳಿಗೆ ಭಾರೀ ದಂಡ ವಿಧಿಸುವ ಮೂಲಕ ರಸ್ತೆ ಸುರಕ್ಷತಾ ನಿಯಮಗಳನ್ನು ಮೀರುವವರ ವಿರುದ್ಧ ಕ್ರಮಕ್ಕೆ ಮುಂದಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply