Connect with us

    LATEST NEWS

    ಎಪ್ರಿಲ್ 18 -19 ರಂದು ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ

    ಬೆಂಗಳೂರು ಎಪ್ರಿಲ್ 15 : ಬಿಸಿಲಿನಿಂದ ಕಂಗೆಟ್ಟಿರುವ ಕರ್ನಾಟಕಕ್ಕೆ ಹವಾಮಾನ ಇಲಾಖೆ ಗುಡ್ ನ್ಯೂಸ್ ಕೊಟ್ಟಿದ್ದುಸ ಎಪ್ರಿಲ್ 18 ಮತ್ತು 19 ರಂದುೂ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.
    ಈ ಎರಡು ದಿನ ಎಲ್ಲ 31 ಜಿಲ್ಲೆಗಳಿಗೂ ಐಎಂಡಿ ‘ಯೆಲ್ಲೊ ಅಲರ್ಟ್‌’ ಸೂಚನೆ ನೀಡಿದೆ. ಪ್ರತಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದೂ ಮುನ್ನೆಚ್ಚರಿಕೆ ನೀಡಲಾಗಿದೆ.

    ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಗಳ ಕೆಲವು ಭಾಗದಲ್ಲಿ ಮಂಗಳವಾರ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಹಾಗೂ ಮಲೆನಾಡು ಭಾಗದ ಕೆಲವು ಪ್ರದೇಶಗಳಲ್ಲಿ ಬುಧವಾರ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.

    Share Information
    Advertisement
    Click to comment

    You must be logged in to post a comment Login

    Leave a Reply