LATEST NEWS
ಜುಲೈ 13 ರಿಂದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ
ಮಂಗಳೂರು ಜೂನ್ 11: ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಸ್ವಲ್ಪ ಕಡಿಮೆಯಾಗಿದ್ದು, ದಕ್ಷಿಣಕನ್ನಡ ಉಡುಪಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಮಳೆ ಸಂಪೂರ್ಣ ಕಡಿಮೆಯಾಗಿದೆ. ಈ ನಡುವೆ ಜುಲೈ 13 ರಿಂದ ಮತ್ತೆ ಮೂರು ದಿನಗಳ ಕಾಲ ಕರಾವಳಿ ಸೇರಿದಂತೆ ಒಟ್ಟು 13ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದಲ್ಲಿ ಮುಂಗಾರು ಮಳೆ ಉತ್ತಮವಾಗಿ ಆಗುತ್ತಿದೆ. ಕರಾವಳಿಯಲ್ಲಿ ಮಳೆ ಪ್ರವಾಹದ ಪರಿಸ್ಥಿತಿ ತಂದು ಅಪಾರ ಹಾನಿಯುಂಟು ಮಾಡಿತ್ತು. ಇದೀಗ ಎರಡು ದಿನಗಳಿಂದ ಬಿಡುವ ಪಡೆದುಕೊಂಡಿದ್ದ ಮಳೆ, ಮತ್ತೆ ಜುಲೈ 13 ರಿಂದ ಹೆಚ್ಚಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 13ರಿಂದ ಮೂರು ದಿನಗಳ ಕಾಲ 13 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
You must be logged in to post a comment Login