LATEST NEWS
ಕರಾವಳಿಯಲ್ಲಿ ಮುಂದುವರೆದ ಮಳೆ ಅಬ್ಬರ – ಉಡುಪಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ

ಉಡುಪಿ ಮೇ 26: ಕರಾವಳಿಯಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದೆ. ಉಡುಪಿ ಹಾಗೂ ದಕ್ಷಿಣಕನ್ನಡದಲ್ಲಿ ಸೋಮವಾರವೂ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಈ ಹಿನ್ನಲೆ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಸೋಮವಾರ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ.
ಭಾನುವಾರ ರಾತ್ರಿಯಿಂದಲೇ ನಿರಂತರವಾಗಿ ಬಿರುಸಿನ ಮಳೆ ಸುರಿಯುತ್ತಿರುವುದರಿಂದ ಉಡುಪಿ ನಗರದ ವಿವಿಧಡೆ ರಸ್ತೆಗಳಲ್ಲಿ ಮಳೆ ನೀರು ನಿಂತು ವಾಹನ ಸವಾರರಿಗೆ ತೊಂದರೆ ಉಂಟಾಯಿತು.
ದಕ್ಷಿಣಕನ್ನಡ ಜಿಲ್ಲೆಯಲ್ಲೂ ನಿರಂತರ ಮಳೆಯಾಗುತ್ತಿದ್ದು, ಈ ಹಿನ್ನಲೆ ಅಂಗನವಾಡಿ ಕೇಂದ್ರಗಳಿಗೆ ಮೇ 26 ರಜೆ ಘೋಷಿಸಲಾಗಿದೆ.
