Connect with us

    LATEST NEWS

    ಭಾರೀ ಮಳೆ ಸಾಧ್ಯತೆ – ಕರಾವಳಿಗೆ ರೆಡ್ ಅಲರ್ಟ್

    ಮಂಗಳೂರು ಜುಲೈ 4: ಕರಾವಳಿಯಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ಕರಾವಳಿ ಕರ್ನಾಟಕ ಭಾಗದಲ್ಲಿ ನಾಳೆ ಬೆಳಗ್ಗಿನವರೆಗೂ ಭಾರೀ ಮಳೆಯ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜುಲೈ 5ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

    ಕರಾವಳಿ ಜಿಲ್ಲೆಗಳಾದ ದ.ಕ., ಉಡುಪಿ, ಉತ್ತರ ಕನ್ನಡದಲ್ಲಿ ಜುಲೈ 5ರ ಬೆಳಗ್ಗೆ 8.30ರಿಂದ ಜು. 6ರ 8.30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಜುಲೈ 8ರವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    Share Information
    Advertisement
    Click to comment

    You must be logged in to post a comment Login

    Leave a Reply