Connect with us

LATEST NEWS

ರಾಜ್ಯದಲ್ಲಿ 3 ದಿನ ಭಾರೀ ಮಳೆ ಸಾಧ್ಯತೆ: 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್…

ಬೆಂಗಳೂರು ಜೂನ್ 3: ಕೇರಳಕ್ಕೆ ಮಾನ್ಸೂನ್ ಮಳೆ ಇಂದು ಪ್ರವೇಶವಾಗಿದ್ದು, ಈ ಹಿನ್ನಲೆ ರಾಜ್ಯದಲ್ಲಿ ಇನ್ನು ಮೂರು ದಿನ ಗುಡುಗು, ಸಿಡಿಲಿನೊಂದಿಗೆ ಭಾರೀ ಮಳೆ ಸುರಿಯುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ರಿಂದ ಜೂನ್ 5 ರವರೆಗೆ 3 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.


ಕೇರಳಕ್ಕೆ ಮುಂಗಾರು ಪ್ರವೇಶವಾದ ಹಿನ್ನಲೆ ಜೂನ್ 6 ಅಥವಾ 7 ರಂದು ಕರ್ನಾಟಕ ಕರಾವಳಿಗೆ ಮುಂಗಾರು ಮಳೆ ಪ್ರವೇಶವಾಗಲಿದೆ ಎಂದು ಅಂದಾಜಿಸಲಾಗಿದೆ. ಮುಂಗಾರು ಪ್ರವೇಶವೂ ಸನಿಹವಾಗಿರುವುದರಿಂದ ಮಳೆಗಾಲದ ಕಾರ್ಯಗಳಿಗೆ ಜನರು ಲಾಕ್​ಡೌನ್​ ನಡುವೆಯೇ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ಅಂದರೆ ಜೂನ್ 5ರ ತನಕ ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿಯೂ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಈಗಾಗಲೇ ಕೇರಳ, ಅಸ್ಸಾಂ, ಮೇಘಾಲಯ, ಆಂಧ್ರಪ್ರದೇಶದ ಕರಾವಳಿ ಪ್ರದೇಶ, ಅರುಣಾಚಲ ಪ್ರದೇಶದಲ್ಲಿ ಮಳೆ ಸುರಿಯುತ್ತಿದ್ದು, ಕರ್ನಾಟಕದಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಭಾಗದಲ್ಲಿ ಇಂದು ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.