LATEST NEWS
ಮುಂದಿನ ಮೂರು ದಿನಗಳ ಕಾಲ ಕರಾವಳಿಯಲ್ಲಿ ಗುಡುಗು ಸಿಡಿಲು ಸಹಿತ ಬಾರೀ ಮಳೆ ಸಾಧ್ಯತೆ
ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಕಳೆದ ಕೆಲವು ದಿನಗಳಿಂದ ಕರಾವಳಿಯಲ್ಲಿ ಮಳೆ ಇಳಿಮುಖವಾಗಿದ್ದು, ಬಿಸಿಲು ಜೊರಾಗಿತ್ತು. ಈಗ ಮತ್ತೆ ಹವಮಾನ ಇಲಾಖೆ ಮಳೆ ಸಾದ್ಯತೆ ಬಗ್ಗೆ ಮುನ್ಸೂಚನೆ ನೀಡಿದೆ.
ಸೆಪ್ಟೆಂಬರ್ 7 ,8 ಹಾಗೂ 9 ರಂದು ಕರಾವಳಿಯಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, 65 ಮಿಮಿ ಗಿಂತ ಅಧಿಕ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಮಾನಾ ಇಲಾಖೆ ಮುನ್ಸೂಚನೆ ನೀಡಿದೆ.
ಆದರೆ ದೇಶದಲ್ಲಿ ಆಗಸ್ಟ್ ತಿಂಗಳಿನಲ್ಲಿ ವಾಡಿಕೆಗಿಂತ ಅಧಿಕ ಪ್ರಮಾಣದ ಮಳೆಯಾಗಿದೆ. ಕಳೆದ 120 ವರ್ಷಗಳ ಅವಧಿಯಲ್ಲಿ ಸುರಿದ ಮಳೆ ಗರಿಷ್ಠ ಪ್ರಮಾಣದ ಮಳೆ ಸುರಿದಿದ್ದು, ಶೇ.27 ರಷ್ಟು ಅಧಿಕ ಪ್ರಮಾಣದ ಮಳೆ ಬಿದ್ದಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.