LATEST NEWS
ರಾಜ್ಯದ ಕರಾವಳಿಯಲ್ಲಿ ಮುಂದಿನ 24 ಗಂಟೆ ನಿರಂತರ ಮಳೆ – ಹವಾಮಾನ ಇಲಾಖೆಯಿಂದ ಹೈ ಅಲರ್ಟ್
ರಾಜ್ಯದ ಕರಾವಳಿಯಲ್ಲಿ ಮುಂದಿನ 24 ಗಂಟೆ ನಿರಂತರ ಮಳೆ – ಹವಾಮಾನ ಇಲಾಖೆಯಿಂದ ಹೈ ಅಲರ್ಟ್
ಮಂಗಳೂರು ಅಗಸ್ಟ್ 14: ರಾಜ್ಯದ ಕರಾವಳಿಯಲ್ಲಿ ನಿರಂತರವಾಗಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದ್ದು ಹವಮಾನ ಇಲಾಖೆಯಿಂದ ಹೈ ಅಲರ್ಟ್ ಘೋಷಣೆಯಾಗಿದ್ದು ಕರಾವಳಿಯ ಜಿಲ್ಲಾಡಳಿತಕ್ಕೆ ತುರ್ತು ಮುನ್ನೆಚ್ಚರಿಕೆ ಸಂದೇಶ ರವಾನಿಸಿದೆ.
ಈ ಕುರಿತಂತೆ ತುರ್ತು ಮುನ್ನೆಚ್ಚರಿಕೆಯನ್ನು ಕರಾವಳಿಯ ಎಲ್ಲಾ ಜಿಲ್ಲಾಡಳಿತಕ್ಕೆ ಕಳುಹಿಸಿರುವ ಕೇಂದ್ರ ಹವಮಾನ ಇಲಾಖೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ನಿರಂತರವಾಗಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಚ್ಚರಿಸಿದೆ.
ಈ ಕುರಿತಂತೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಮುಂದಿನ 24 ಗಂಟೆಗಳ ಕಾಲ ಕರಾವಳಿ ಪ್ರದೇಶದಲ್ಲಿ ಯಾವುದೇ ಮೀನುಗಾರರು ಸಮುದ್ರ ಅಥವಾ ನದಿಗಳಲ್ಲಿ ಮೀನುಗಾರಿಕೆಗೆ ತೆರಳಬಾರದು ಎಂದು ಆದೇಶಿಸಿದ್ದಾರೆ.
ಅಲ್ಲದೆ ತಗ್ಗು ಪ್ರದೇಶ ಮತ್ತು ನದಿ ತೀರದಲ್ಲಿ ವಾಸಿಸುತ್ತಿರುವ ಜನರು ಪ್ರವಾಹ ಸ್ಥಿತಿ ಇರುವ ತಗ್ಗು ಪ್ರದೇಶ ಅಥವಾ ನದಿಗೆ ತೆರಳಬಾರದು. ಶಾಲಾ ಕಾಲೇಜುಗಳಿಗೆ ಮಂಗಳವಾರ ರಜೆ ನೀಡಿದ್ದು, ಮಕ್ಕಳು ನೀರು ತುಂಬಿರುವ ತಗ್ಗು ಪ್ರದೇಶ ಅಥವಾ ನದಿ ತೀರಕ್ಕೆ ತೆರಳದಂತೆ ಪೋಷಕರು ಎಚ್ಚರಿಕೆ ವಹಿಸಬೇಕು’ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕರಿಗೆ ಮಳೆಯಿಂದ ಯಾವುದೇ ರೀತಿಯ ತೊಂದರೆ ಉಂಟಾದಲ್ಲಿ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 1077ಗೆ ಕರೆಮಾಡಿ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ