Connect with us

LATEST NEWS

ಮಹಾಮಳೆಗೆ ಕರಾವಳಿ ತತ್ತರ ಅಪಾಯಮಟ್ಟದಲ್ಲಿ ಹರಿಯುತ್ತಿರುವ ನದಿಗಳು

ಮಹಾಮಳೆಗೆ ಕರಾವಳಿ ತತ್ತರ ಅಪಾಯಮಟ್ಟದಲ್ಲಿ ಹರಿಯುತ್ತಿರುವ ನದಿಗಳು

ಮಂಗಳೂರು ಅಗಸ್ಟ್ 10: ಮಂಗಳೂರು ಸೇರಿದಂತೆ ರಾಜ್ಯದ ಕರಾವಳಿ ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಕರಾವಳಿಯ ಬಹುತೇಕ ನದಿಗಳು ಅಪಾಯಮಟ್ಟದಲ್ಲಿ ಹರಿಯುತ್ತಿದೆ.

ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲಿ ಮೇಘಸ್ಪೋಟ ರೀತಿಯಲ್ಲಿ ಮಳೆಯಾಗುತ್ತಿದ್ದು, ನೆರೆಯ ಪರಿಸ್ಥಿತಿ ಸೃಷ್ಠಿಯಾಗಿದೆ. ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಕಡಲಿನ ಅಬ್ಬರ ಕೂಡ ಜಾಸ್ತಿಯಾಗಿದ್ದು, ಮಂಗಳೂರಿ ನಿಂದ ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ದೋಣಿಗಳು ತಟಕ್ಕೆ ಹಿಂದಿರುಗಲಾಗದೇ ಆಳ ಸಮುದ್ರದಲ್ಲೇ ಲಂಗರು ಹಾಕಿವೆ.

ಮಂಗಳೂರು ನಗರದಲ್ಲಿ ಮಧ್ಯಾಹ್ನ ಸುರಿದ ಭಾರಿ ಮಳೆಗೆ ಕೊಟ್ಟಾರಚೌಕಿಯಲ್ಲಿ ಕೃತಕ ನೆರೆ ಪರಿಸ್ಥಿತಿ ಉಂಟಾಗಿತ್ತು. ಸುಗಮ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಅಗತ್ಯ ಕ್ರಮಗಳನ್ನು ಸೂಚಿಸಿದರು.

ಈ ನಡುವೆ ಮೀನುಗಾರಿಕೆಗೆ ತೆರಳಿದ ಸರಿಸುಮಾರು 800 ಮೀನುಗಾರಿಕಾ ದೋಣಿಗಳ ಪೈಕಿ ಕೆಲವು ಮೀನುಗಾರಿಕಾ ದೋಣಿಗಳು ಹಿಂದಿರುಗಿದ್ದು ಉಳಿದ ದೋಣಿಗಳು ಬಂದರಿಗೆ ಹಿಂದಿರುಗಲಾಗದೇ ಆಳ ಸಮುದ್ರದಲ್ಲೇ ಲಂಗರುಹಾಕಿವೆ. ಈ ದೋಣಿಗಳಿಂದ ಅಪಾಯದ ಮುನ್ಸೂಚನೆ ದೊರೆತರೆ ತತಕ್ಷಣ ರಕ್ಷಣಗೆ ತೆರಳಲು ತಡರಕ್ಷಣಾ ಪಡೆಯನ್ನು ಸನ್ನದ್ದ ಸ್ಥತಿಯಲ್ಲಿ ಇರಿಸಲಾಗಿದೆ.

ಇನ್ನೊಂದೆಡೆ ಮೇಘ ಸ್ಪೋಟಕ್ಕೆ ನೆರೆಯ ಕೇರಳದ ತತ್ತರಿಸಿದೆ. ಕೇರಳ ಕರಾವಳಿಯಲ್ಲಿ ಕಡಲ ಅಬ್ಬರ ಹೆಚ್ಚಾಗಿದೆ. ಕಾಸರಗೋಡು , ಕಣ್ಣೂರು ಪ್ರದೇಶದಲ್ಲಿ ಆಳೆತ್ತರದ ಅಲೆಗಳ ಹೊಡೆತಕ್ಕೆ ಸಿಲುಕಿ ಹಲವಾರು ಮೀನುಗಾರಿಕಾ ದೋಣಿಗಳು ಹಾನಿಗೊಂಡಿವೆ. ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರ ಅಲೆಗಳ ಹೊಡೆತಕ್ಕೆ ಸಿಲುಕಿ ಮಗುಚಿ ಬಿದ್ದ ವಿಡಿಯೋ ಒಂದು ಸಾಮಾಜಿಕ ಜಾಲತಾಣಕ್ಕೆ ವೈರಲ್ ಆಗಿದೆ. ಈ ಘಟನೆಯಲ್ಲಿ ಸಮುದ್ರಕ್ಕೆ ಎಸೆಯಲ್ಪಟ್ಟ 4 ಮಂದಿ ಮೀನುಗಾರರನ್ನು ರಕ್ಷಿಸಲಾಗಿದ್ದು ಒರ್ವ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.

ಕಡಲಲ್ಲಿ ಆಳೆತ್ತರದ ಅಲೆಗಳು ಏಳುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

VIDEO

Share Information
Continue Reading
Advertisement
Click to comment

Leave a Reply

Your email address will not be published. Required fields are marked *