Connect with us

LATEST NEWS

ಕರಾವಳಿಯಲ್ಲಿ ಮುಂದುವರೆದ ಮಳೆ ಆರ್ಭಟ

ಬೆಂಗಳೂರು, ಅ. 15 : ಕರಾವಳಿಯಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ಇಂದೂ ಕೂಡ ಮುಂದುವರೆದಿದ್ದು, ಕರಾವಳಿ ಜಿಲ್ಲೆಗಳಲ್ಲಿ ಇಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ವಾಯುಭಾರ ಕುಸಿತದಿಂದಾಗಿ ರಾಜ್ಯದಾದ್ಯಂತ ಇನ್ನು 2-3 ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ ಎಂದು ಹವಮಾನಾ ಇಲಾಖೆ ತಿಳಿಸಿದೆ.


ಈಗಾಗದೇಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ, ಮಳೆಯಾಗುತ್ತಿದ್ದು ಹಲವು ಜಿಲ್ಲೆಗಳಲ್ಲಿ ಹಾನಿ ಉಂಟಾಗಿದೆ. ನದಿಗಳು ತುಂಬಿ ಹರಿಯುತ್ತಿದೆ. ಹಲವಾರು ಮರಗಳು ಮತ್ತು ವಿದ್ಯುತ್ ಕಂಬಗಳನ್ನು ಧರಶಾಹಿಯಾಗಿದೆ. ತಗ್ಗು ಪ್ರದೇಶಗಳು ಜಲಾವೃತವಾಗಿದೆ. ಈಗಾಗಲೇ ಈ ತಿಂಗಳು ಕಟಾವಿಗಾಗಿ ಕಾಯುತ್ತಿದ್ದ ಬೆಳೆಗಳಿಗೆ ಸತತ ಮಳೆಯಿಂದಾಗಿ ಹಾನಿಯಾಗಿದ್ದು ರೈತರಿಗೆ ಭಾರೀ ನಷ್ಟ ಉಂಟಾಗಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Facebook Comments

comments