Connect with us

DAKSHINA KANNADA

ದಕ್ಷಿಣಕನ್ನಡ ಹಾಗೂ ಪಶ್ಚಿಮಘಟ್ಟಗಳಲ್ಲಿ ಭಾರೀ ಮಳೆ, ಹಲವು ರಸ್ತೆ, ಮನೆ ಜಲಾವೃತ

ದಕ್ಷಿಣಕನ್ನಡ ಹಾಗೂ ಪಶ್ಚಿಮಘಟ್ಟಗಳಲ್ಲಿ ಭಾರೀ ಮಳೆ, ಹಲವು ರಸ್ತೆ, ಮನೆ ಜಲಾವೃತ

ಮಂಗಳೂರು, ಅಗಸ್ಟ್ 08: ದಕ್ಷಿಣಕನ್ನಡ ಜಿಲ್ಲೆ ಹಾಗೂ ಪಶ್ಚಿಮಘಟ್ಟ ಪ್ರದೇಶದಲ್ಲಿ ಇಂದು ಕೂಡಾ ಭಾರೀ ಮಳೆಯಾಗುತ್ತಿದೆ.

ಮಳೆಯಿಂದಾಗಿ ಕುಮಾರಧಾರಾ ಮತ್ತು ನೇತ್ರಾವತಿ ನದಿ ಉಕ್ಕಿ ಹರಿಯುತ್ತಿದ್ದು ,ಜಿಲ್ಲೆಯ ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ.

ಸುಬ್ರಹ್ಮಣ್ಯ ಕುಲ್ಕುಂದ ದ ಪರಿಶಿಷ್ಟ ಕಾಲನಿಗೆ ಕುಮಾರಧಾರಾ ನದಿ ನೀರು ನುಗ್ಗಿದ್ದು ನಾಲ್ಕು ಮನೆಗಳಿಗೆ ತೊಂದರೆಯಾಗಿದೆ.

ಒಂದು ಮನೆ ಜಲಾವೃತವಾಗಿದ್ದು, ಇನ್ನುಳಿದ ಮನೆಗಳೂ ಜಲಾವೃತವಾಗುವ ಲಕ್ಷಣಗಳು ಗೋಚರಿಸಲಾರಂಭಿಸಿದೆ.

ಮನೆಯವರು ಮುಂಜಾಗ್ರತಾ ಕ್ರಮವಾಗಿ ಬೇರೆಡೆಗೆ ಸ್ಥಳಾಂತರಗೊಂಡಿದ್ದು, ಸಂತ್ರಸ್ತರಿಗೆ ಗಂಜಿ ಕೇಂದ್ರದ ವ್ಯವಸ್ಥೆ ಇನ್ನಷ್ಟೇ ಆಗಬೇಕಿದೆ.

ಕುಮಾರಧಾರಾ ನದಿ ನೀರು ಸುಬ್ರಹ್ಮಣ್ಯ ಸ್ನಾನಘಟ್ಟದ ಬಳಿ ಸುಬ್ರಹ್ಮಣ್ಯ-ಮಂಜೇಶ್ಚರ ರಾಜ್ಯ ಹೆದ್ದಾರಿಗು ನುಗ್ಗಿದ್ದು, ಈ ರಸ್ತೆಯಲ್ಲಿ ವಾಹನ ಸಂಚಾರ ನಿಶೇಧಿಸಲಾಗಿದೆ.

ಅಲ್ಲದೆ ಸುಳ್ಯ-ಸುಬ್ರಹ್ಮಣ್ಯ-ಸಕಲೇಶಪುರ ಸಂಪರ್ಕಿಸುವ ಬಿಸಿಲೆ ಘಾಟ್ ರಸ್ತೆಯಲ್ಲೂ ಮರ ಹಾಗೂ ಗುಡ್ಡ ಕುಸಿದ ಪರಿಣಾಮ ಬಿಸಿಲೆ ಘಾಟ್ ರಸ್ತೆಯಲ್ಲೂ ಸಂಚಾರಕ್ಕೆ ತೊಡಕಾಗಿದೆ.

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಉದನೆ ಬಳಿ ಉದನೆ ಹೊಳೆ ಹೆದ್ದಾರಿಗೆ ನುಗ್ಗಿದ ಪರಿಣಾಮ ಹೆದ್ದಾರಿ ಸಂಚಾರಕ್ಕೆ ತೊಂದರೆಯಾಗಿದೆ.

ನೇತ್ರಾವತಿ ಹಾಗೂ ಕುಮಾರಧಾರಾ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲೂ ನೀರು ಹೆಚ್ಚಾಗುತ್ತಿವೆ.

ಉದನೆ ಹೊಳೆಯಲ್ಲೂ ನೀರಿನ ಹರಿವು ಹೆಚ್ಚಾಗುತ್ತಿದ್ದು, ಉದನೆಯ ತೂಗು ಸೇತುವೆಯೂ ಭಾಗಶ ಜಲಾವೃತವಾಗಿದೆ.

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಸಿರಿಬಾಗಿಲು ಎಂಬಲ್ಲಿ ನಿರಂತರವಾಗಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿಯುತ್ತಿದ್ದು, ಇಂದು ಕೂಡಾ ರೈಲು ಸೇವೆ ಬಂದ್ ಆಗುವ ಸಾಧ್ಯತೆ ಹೆಚ್ಚಾಗಿದೆ.

VIDEO

Facebook Comments

comments