UDUPI
ಗುಡುಗು ಸಿಡಿಲು ಸಹಿತ ಭಾರೀ ಮಳೆಗೆ – ಉಡುಪಿ ಜಿಲ್ಲೆಯಲ್ಲಿ ಅಪಾರ ಹಾನಿ
ಉಡುಪಿ ಎಪ್ರಿಲ್ 13: ಉಡುಪಿ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸುರಿದ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಗೆ ಅಪಾರ ಹಾನಿ ಸಂಭವಿಸಿದೆ.
ಬಿಸಿಲ ಬೇಗೆ ನಡುವೆ ಕರಾವಳಿಯಲ್ಲಿ ಮಳೆ ಆರಂಭವಾಗಿದ್ದು, ರಾತ್ರಿ ಸಂದರ್ಭ ಸುರಿಯುತ್ತಿರುವ ಮಳೆಗೆ ಮನೆ ಹಾನಿಯಾಗಿ, ಮರಗಳು ಬಿದ್ದ ಘಟನೆ ನಡೆದಿದೆ. ಮಿಂಚಿನಿಂದಾಗಿ ಬ್ರಹ್ಮಾವರ ತಾಲೂಕಿನ ನಾಗರತ್ನ ಭುಜಂಗ ಶೆಟ್ಟಿಗೆ ಸೇರಿದ ಮನೆ ಹಾನಿಯಾಗಿದ್ದು, ಘಟನೆ ನಡೆದಾಗ ಮನೆಯಲ್ಲಿ 6 ಜನರಿದ್ದು ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಮನೆಯ ಅನೇಕ ಉಪಕರಣಗಳು ಹಾನಿಗೊಂಡಿವೆ.
ಕಾಪು, ಉಡುಪಿ ಮತ್ತು ಕಾರ್ಕಳ ತಾಲೂಕಿನ ಅನೇಕ ಭಾಗಗಳಲ್ಲಿ ಮಳೆಯಾಗಿದೆ. ಕೆಮ್ಮಣ್ಣುವಿನಲ್ಲಿ ಮರವೊಂದು ಮುಖ್ಯ ರಸ್ತೆಯಲ್ಲಿ ಬಿದ್ದಿದ್ದು, ಸಂಚಾರ ವ್ಯವಸ್ಥೆ ಸ್ಥಗಿತಗೊಳಿಸಿ ಬಳಿಕ ಸ್ಥಳೀಯ ಪಂಚಾಯತ್ ಸದಸ್ಯರು ಮತ್ತು ಜನರು ರಸ್ತೆಯಿಂದ ಮರವನ್ನು ತೆರವುಗೊಳಿಸಿದ್ದಾರೆ.
ಹವಮಾನ ಇಲಾಖೆಯ ಪ್ರಕಾರ ಕರಾವಳಿ ಜಿಲ್ಲೆಗಳಲ್ಲಿ ಎಪ್ರಿಲ್ 13 ರಿಂದ 15ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ.