DAKSHINA KANNADA
ರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಭಾರೀ ಮಳೆ; ಹವಾಮಾನ ಇಲಾಖೆಯ ಎಚ್ಚರಿಕೆ..!
ಬೆಂಗಳೂರು: ರಾಜ್ಯದಲ್ಲಿ ಜ.3ರಿಂದ ನಾಲ್ಕು ದಿನ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ರಾಜ್ಯದಲ್ಲಿ ವರುಣ ಅಬ್ಬರಿಸಲಿದ್ದಾನೆ. ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಿಂಗಾರು ಮಳೆ ಇನ್ನೇನು ಕೆಲವೇ ದಿನಗಳಲ್ಲಿ ಮುಕ್ತಾಯವಾಗಲಿದೆಯಾದ್ರೂ.ಇದೇ ಭಾರೀ ಮಳೆ ಬರಬಹುದು ಎಂದು ಸೂಚನೆ ನೀಡಿದೆ ಹವಾಮಾನ ಇಲಾಖೆ.
ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲೂ ನಾಲ್ಕು ದಿನಗಳ ಕಾಲ ಮಳೆ ಇರಲಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರಮರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆ ಸಾಧ್ಯತೆ ಇದೆ.
ಚೆನ್ನೈ ಮತ್ತು ಅದರ ನೆರೆಯ ಜಿಲ್ಲೆಗಳಲ್ಲಿ ಗುರುವಾರ ಭಾರೀ ಮಳೆಯಾಗಿದ್ದು, ಅನೇಕ ತಗ್ಗು ಪ್ರದೇಶಗಳಲ್ಲಿ ಜಲಾವೃತವಾಗಿದೆ ಮತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಇಂದು ಕೂಡ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
You must be logged in to post a comment Login