LATEST NEWS
ಭಾರಿ ಮಳೆ ಹಿನ್ನಲೆ ಕರಾವಳಿಯಲ್ಲಿ ಹೈ ಅಲರ್ಟ್ ಘೋಷಣೆ
ಭಾರಿ ಮಳೆ ಹಿನ್ನಲೆ ಕರಾವಳಿಯಲ್ಲಿ ಹೈ ಅಲರ್ಟ್ ಘೋಷಣೆ
ಮಂಗಳೂರು ಜುಲೈ 8: ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ವರುಣನ ಆರ್ಭಟ ಜೋರಾಗಿದೆ. ಇನ್ನು ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು ಹೈ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 11ರ ತನಕ ಮಳೆ ಮುಂದುವರಿಯಲಿದ್ದು, ಜಿಲ್ಲಾಡಳಿತ ತುರ್ತು ನಿರ್ವಹಣೆಗೆ ಸಿದ್ಧಗೊಂಡಿದೆ. ತಗ್ಗು ಪ್ರದೇಶಗಳೂ ಜಲಾವೃತಗೊಂಡಿದ್ದು, ಅವರನ್ನು ರಕ್ಷಣಾ ತಂಡಗಳು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ. ಪ್ರಾಕೃತಿಕ ವಿಕೋಪ ನಿಧಿಯಿಂದ ಈಗಾಗಲೇ ರಕ್ಷಣಾ ಪರಿಕರಗಳನ್ನು ಜಿಲ್ಲಾಡಳಿತ ಖರೀದಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಹೋಂ ಗಾರ್ಡ್‍ಗೆ ಹಸ್ತಾಂತರಿಸಿದ್ದಾರೆ.
ಎನ್‌ಡಿಆರ್‌ಎಫ್ ಆಗಮನ
ರಾಷ್ಟ್ರೀಯ ವಿಕೋಪ ನಿರ್ವಹಣಾ ಪಡೆಯ 30 ಮಂದಿಯ ಎರಡು ತಂಡ ಜು.8ರಂದು ಮಂಗಳೂರಿಗೆ ತಲುಪಲಿದೆ. ಒಂದು ತಂಡ ದಕ್ಷಿಣ ಕನ್ನಡ ಮತ್ತು ಇನ್ನೊಂದು ಉಡುಪಿಯಲ್ಲಿ ಪರಿಹಾರ ಕಾರ್ಯ ನಡೆಸಲಿವೆ. ಅವರಿಗೆ ಜಿಲ್ಲಾಡಳಿತ ಮಾರ್ಗದರ್ಶನ ನೀಡಲಿದೆ ಎಂದು ವಸತಿ ಸಚಿವ ಯು.ಟಿ.ಖಾದರ್ ಹೇಳಿದರು.
ಜುಲೈ 7ರ ತನಕ ವಾಡಿಕೆಯಂತೆ 1451 ಮಿ.ಮೀ. ಮಳೆ ಆಗಬೇಕಿತ್ತು. ಈ ಬಾರಿ 1957 ಮಿ.ಮೀ., ಶೇ. 35 ಅಂದರೆ ಶೇ. 35ರಷ್ಟು ಹೆಚ್ಚುವರಿ ಮಳೆಯಾಗಿದೆ. ಮೇ ಜೂನ್‌ನಲ್ಲಿ ಶೇ. 236 ಮಳೆಯಾಗಿದೆ. ಶುಕ್ರವಾರ ಒಂದೇ ದಿನ ಶೇ. 234 ಮಳೆಯಾಗಿದೆ. ಜು.11ರ ತನಕ ಶೇ. 160ರಷ್ಟು ಮಳೆಯಾಗಲಿದೆ ಎಂದು ಹೇಳಿದರು.