Connect with us

    LATEST NEWS

    ತೀವ್ರ ಮಳೆ: ಉಡುಪಿ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು (ಜುಲೈ 5) ರಜೆ

    ಉಡುಪಿ, ಜುಲೈ 05: ಮಳೆ ಮುಂದುವರಿದ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು(ಜುಲೈ 05) ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ರಜೆ ಘೋಷಿಸಿ ಆದೇಶಿಸಿದ್ದಾರೆ.

    ಕರಾವಳಿ ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ನಿರಂತರವಾಗಿ ಮಳೆ ಸುರಿಯುತ್ತಿದ್ದು ಹಲವೆಡೆ ತಗ್ಗು ಪ್ರದೇಶಗಳಲ್ಲಿ ನೀರು ಅವರಿಸಿಕೊಂಡಿದೆ.

    ಎಡೆಬಿಡದೆ ಸುರಿಯುತ್ತಿರುವ ಮಳೆಯ ಕಾರಣ ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ಜಿಲ್ಲಾಡಳಿತ ಪ್ರಾಥಮಿಕ, ಪ್ರೌಢಶಾಲೆ, ಪದವಿ ತರಗತಿಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply