LATEST NEWS
ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮಳೆ ಅಬ್ಬರ – ಇಂದು (ಮೇ 30) ಶಾಲೆಗಳಿಗೆ ರಜೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು (ಮೇ 30) ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಇನ್ನು ಉಡುಪಿಯಲ್ಲೂ ಮಳೆ ಅಬ್ಬರ ಮುಂದುವರೆದಿದ್ದು, ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಹಾಗೂ ಒಂದರಿಂದ ಹತ್ತನೇ ತರಗತಿವರೆಗೆ ( ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ) ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.

Continue Reading