UDUPI
ಜುಲೈ 5 ರವರೆಗೆ ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ….!!
ಉಡುಪಿ: ಕರಾವಳಿ ಜಿಲ್ಲೆ ಉಡುಪಿ ಹಾಗೂ ದಕ್ಷಿಣಕನ್ನಡದಲ್ಲಿ ಜುಲೈ 5 ರವರೆಗೆ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜುಲೈ ನಾಲ್ಕಕ್ಕೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಭಾರೀ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇನ್ನು ಉಡುಪಿಯಲ್ಲಿ ಕಳೆದ 24 ಗಂಟೆಯ ಮಳೆ ವರದಿ ಬಿಡುಗಡೆ ಮಾಡಿರುವ ಇಲಾಖೆ, ಉಡುಪಿಯಲ್ಲಿ 34 ಮಿಲಿ ಮೀಟರ್, ಕುಂದಾಪುರದಲ್ಲಿ 17 ಮಿಲಿ ಮೀಟರ್, ಕಾರ್ಕಳ ತಾಲೂಕಿನಲ್ಲಿ 24 ಮಿಲಿ ಮೀಟರ್ ಮಳೆ ಬಿದ್ದಿದೆ. ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣ ಇದೆ. ಜಿಲ್ಲೆಯಾದ್ಯಂತ ಅಲ್ಲಲ್ಲಿ ಮಳೆ ಆರಂಭವಾಗಿದೆ.
ಕಳೆದ ರಾತ್ರಿಯೂ ಧಾರಾಕಾರ ಮಳೆಯಾಗಿದ್ದು, ಒಂದು ವಾರ ಮಳೆ ಮುಂದುವರಿಯಲಿದೆ. ಇತ್ತ ದಕ್ಷಿಣಕನ್ನಡ ಜಿಲ್ಲೆಯಲ್ಲೂ ಬೆಳಿಗ್ಗೆಯಿಂದಲೇ ಧಾರಾಕಾರ ಮಳೆಯಾಗುತ್ತಿದೆ.