LATEST NEWS
ಕರಾವಳಿಯಲ್ಲಿ ಮುಂಜಾನೆಯಿಂದ ಸುರಿಯುತ್ತಿರುವ ಭಾರಿ ಮಳೆ
ಕರಾವಳಿಯಲ್ಲಿ ಮುಂಜಾನೆಯಿಂದ ಸುರಿಯುತ್ತಿರುವ ಭಾರಿ ಮಳೆ
ಮಂಗಳೂರು ಜೂನ್ 19: ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಬಿಡುವು ಪಡೆದಿದ್ದ ಮಳೆ ಮತ್ತೆ ಆರಂಭವಾಗಿದೆ. ಹವಮನಾನ ಇಲಾಖೆ ನೀಡಿದ ಮುನ್ಸೂಚನೆಯಂತೆ ಕರಾವಳಿಯಲ್ಲಿ ಭಾರಿ ಮಳೆಯಾಗುತ್ತಿದೆ.
ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ , ಉಡುಪಿ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದ ಮಳೆ ಸುರಿಯುತ್ತಿದೆ. ಇಂದು ಮುಂಜಾನೆಯಿಂದ ನಗರ ಸುತ್ತಮುತ್ತ ಗುಡುಗು ಸಹಿತ ಜಡಿಮಳೆ ಸುರಿಯುತ್ತದೆ.
ಭಾರೀ ಮಳೆಯ ಪರಿಣಾಮ ಮಂಗಳೂರಿನ ರಸ್ತೆಗಳಲ್ಲಿ ಮಳೆ ನೀರು ಹರಿಯಲಾರಂಬಿಸಿದೆ. ಈ ಹಿನ್ನಲೆಯಲ್ಲಿ ವಾಹನ ಸಂಚಾರಕ್ಕೆ ತೊಡಕುಂಟಾಗಿದೆ. ನಗರದ ಚರಂಡಿಗಳು ಉಕ್ಕಿ ಹರಿಯುತ್ತಿವೆ.
ಹವಾಮಾನ ಇಲಾಖೆಯ ಮುನ್ನೆಚ್ಚರಿಕೆಯ ಪ್ರಕಾರ ಮುಂದಿನ 24 ಗಂಟೆಯಲ್ಲಿ ಕರಾವಳಿ ಹಾಗು ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಎಚ್ಚರಿಕೆ ಇಂದ ಇರುವಂತೆ ಸೂಚನೆ ರವಾನಿಸಲಾಗಿದೆ. ಮೀನುಗಾರರು ಕಡಲಿಗೆ ಇಳಿಯದಂತೆ ಆದೇಶ ಹೊರಡಿಸಲಾಗಿದೆ.
ಚಾರ್ಮಾಡಿ ಘಾಟಿಯಲ್ಲಿಯೂ ಹೆಚ್ಚು ಮಳೆಯಾಗುತ್ತಿದೆ. ಅಷ್ಟೇ ಅಲ್ಲದೇ ರಸ್ತೆ ಕಾಣದಂತೆ ಮಂಜು ಆವರಿಸಿದೆ. ಮಂಜಿನ ಜೊತೆಯೇ ಮಳೆ ಸುರಿಯುತ್ತಿರುವುದರಿಂದ ರಸ್ತೆ ಸಂಚಾರದಲ್ಲಿ ವ್ಯತ್ಯಯವಾಗಿದ್ದು, ಪ್ರಯಾಣಿಕರಿಗೆ ಕೊಂಚ ತೊಂದರೆಯುಂಟಾಗಿದೆ.