LATEST NEWS
ಕರಾವಳಿಯಾದ್ಯಂತ ಮುಂಜಾನೆ ಸುರಿದ ಭಾರಿ ಮಳೆ ಬಿಸಿಲಿಗೆ ಬೆಂದಿದ್ದ ಭೂಮಿಗೆ ತಂಪೆರೆದ ವರುಣ
ಕರಾವಳಿಯಾದ್ಯಂತ ಮುಂಜಾನೆ ಸುರಿದ ಭಾರಿ ಮಳೆ ಬಿಸಿಲಿಗೆ ಬೆಂದಿದ್ದ ಭೂಮಿಗೆ ತಂಪೆರೆದ ವರುಣ
ಮಂಗಳೂರು ಮಾ.2: ದಕ್ಷಿಣಕನ್ನಡ ಸೇರಿದಂತೆ ಉಡುಪಿ ಜಿಲ್ಲೆಯಾದ್ಯಂತ ಇಂದು ಮುಂಜಾನೆ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಮುಂಜಾನೆ 4 ಗಂಟೆಯಿಂದ ಪ್ರಾರಂಭವಾದ ಮಳೆ ಸುಮಾರು 2 ಗಂಟೆಗಳ ಕಾಲ ಎಡೆಬಿಡದೆ ಸುರಿದಿದೆ. ಬೆಳ್ತಂಗಡಿ, ಕಡಬ, ಪುತ್ತೂರು ತಾಲೂಕು ಸೇರಿದಂತೆ ಮಂಗಳೂರಿನ ಹಲವೆಡೆ ಮಳೆಯಾಗಿದೆ.ಬಾರಿ ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜನತೆಗೆ ಮಳೆ ತಂಪೆರಗಿಸಿದೆ.
ಉಡುಪಿಯಲ್ಲೂ ತಡರಾತ್ರಿ ಕೆಲವೆಡೆ ದಿಢೀರ್ ಮಳೆಯಾಗಿದ್ದು, ಮುಂಜಾನೆ ಕೂಡ ಮಳೆ ಮುಂದುವರಿದಿದೆ. ಬೆಳಗಿನ ಜಾವದಿಂದಲೂ ನಗರಾದ್ಯಂತ ಉತ್ತಮ ಮಳೆಯಾಗಿದ್ದು, ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದೆ. ದಿಢೀರ್ ಮಳೆ ಹೆದ್ದಾರಿ ಕೆಸರುಮಯವಾಗಿದ್ದು, ಹೊಸದಾಗಿ ನಿರ್ಮಾಣವಾದ ರಸ್ತೆಯ ಮಣ್ಣೆಲ್ಲ ಕೊಚ್ಚಿ ಹೋಗಿದೆ. ಸದ್ಯ ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ಮಳೆ ಮುಂದುವರಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ಕುಂದಾಪುರ, ಕಾರ್ಕಳ, ಬೈಂದೂರು ವ್ಯಾಪ್ತಿಯ ಅಲ್ಲಲ್ಲಿ ಮಳೆಯಾಗಿದ್ದು, ನಗರವಾಸಿಗಳಿಗೆ ಮಳೆ ಖುಷಿಕೊಟ್ಟರೆ ಕೃಷಿಕರು, ಬೇಸಾಯಗಾರರಿಗೆ ಈ ಮಳೆ ಆತಂಕ ಮೂಡಿಸಿದೆ.
ಈ ನಡುವೆ ಜಿಲ್ಲೆಯಲ್ಲಿ ಇಂದು ಮುಂಜಾನೆ ಸುರಿದ ಅಕಾಲಿಕ ಮಳೆ ಭಾರಿ ಅವಾಂತರ ಸೃಷ್ಟಿಸಿದೆ. ಮಧ್ಯರಾತ್ರಿ ಸುಮಾರು 2 ಗಂಟೆ ಹೊತ್ತಿಗೆ ಆರಂಭವಾದ ಮಳೆ ನಿರಂತರವಾಗಿ ಸುರಿದಿದ್ದು, ಮಂಗಳೂರು ನಗರ ಸೇರಿದಂತೆ ಆನೇಕ ಕಡೆ ಅವಾಂತರ ಸೃಷ್ಟಿಸಿದೆ. ಅಭಿವೃದ್ದಿ ಕಾರ್ಯಗಳು ನಡೆಯುತ್ತಿದ್ದ ಮಂಗಳೂರು ಸ್ಮಾರ್ಟ್ ಸಿಟಿಯಲ್ಲಿ ಏಕಾಎಕಿ ಸುರಿದ ಮಳೆಯಿಂದ ಆನೇಕ ಕಡೆ ತಗ್ಗು ಪ್ರದೇಶಗಳು ಜಲಾವೃತಗೊಂಡಿತ್ತು.ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ ಹಿನ್ನಲೆ ರಸ್ತೆಯಲ್ಲಿ ನೀರು ಹರಿಯುವಂತಾಗಿತ್ತು.