LATEST NEWS
ಜೂನ್ 29ರವರೆಗೆ ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ…!!

ಮಂಗಳೂರು: ಕಳೆದ ಕೆಲವು ದಿನಗಳಿಂದ ಸ್ತಬ್ದವಾಗಿದ್ದ ಮಳೆ ಮತ್ತೆ ಪ್ರಾರಂಭವಾಗಿದ್ದು, ಜೂನ್ 29 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಕಳೆದ ಮೂರು ನಾಲ್ಕು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಇದ್ದು, ಕೆಲವು ಕಡೆಗಳಲ್ಲಿ ಸಾಮಾನ್ಯ ಮಳೆ ಸುರಿದಿತ್ತುಪ, ಇನ್ನು ಗುರುವಾರ ರಾತ್ರಿ ಕೆಲವು ಕಡೆ ಸ್ವಲ್ಪ ಹೊತ್ತು ಉತ್ತಮ ಮಳೆಯಾಗಿದೆ. ಗ್ರಾಮಾಂತರ ಭಾಗದ ವಿವಿಧೆಡೆ ಮುಂಜಾನೆ ವೇಳೆ ದಟ್ಟ ಮಂಜು ಕವಿದು, ಚಳಿಗಾಲದಂತೆ ಗೋಚರಿಸಿದೆ.

ಭಾನುವಾರದಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚಿಸಿದ್ದು, ಯಲ್ಲೋ ಅಲರ್ಟ್ ಘೋಷಿಸಿದೆ.